ಆಲಮಟ್ಟಿ ಜಲಾಶಯ, ನೀರಾವರಿ ಹಾಗೂ ರೈತರ ಹಿತರಕ್ಷಣೆಗೆ ಮೊದಲ ಆದ್ಯತೆ: ಶಿವಾನಂದ ಪಾಟೀಲ
ವಿಜಯಪುರ, 21 ಜುಲೈ (ಹಿ.ಸ.) ಆ್ಯಂಕರ್ : ರಾಜ್ಯದ ಕೃಷಿ ಹಾಗೂ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಲಮಟ್ಟಿ ಜಲಾಶಯ, ನೀರಾವರಿ ಯೋಜನೆಗಳು ಮತ್ತು ನೀರಿನ ಸಮರ್ಪಕ ನಿರ್ವಹಣೆಗೆ ಸರ್ಕಾರ ಅತ್ಯುನ್ನತ ಆದ್ಯತೆ ನೀಡಿದೆ ಎಂದು ಶಾಸಕ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀ
ಹ್ಯಾಶ್


ವಿಜಯಪುರ, 21 ಜುಲೈ (ಹಿ.ಸ.)

ಆ್ಯಂಕರ್ : ರಾಜ್ಯದ ಕೃಷಿ ಹಾಗೂ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಲಮಟ್ಟಿ ಜಲಾಶಯ, ನೀರಾವರಿ ಯೋಜನೆಗಳು ಮತ್ತು ನೀರಿನ ಸಮರ್ಪಕ ನಿರ್ವಹಣೆಗೆ ಸರ್ಕಾರ ಅತ್ಯುನ್ನತ ಆದ್ಯತೆ ನೀಡಿದೆ ಎಂದು ಶಾಸಕ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದಲ್ಲಿನ ನೀರಿನ ಸಂಗ್ರಹ, ನೀರಿನ ಮಟ್ಟ ಹಾಗೂ ನಿರ್ವಹಣೆಯ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು ಸ್ಥಳದಲ್ಲೇ ಪರಿಶೀಲನೆ ನಡೆಸಿದ ಅವರು, ರೈತರಿಗೆ ಯಾವುದೇ ರೀತಿಯ ನೀರಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಫಿಷರೀಸ್ ಕಾಲೇಜು, ಮಾಂಗಲ್ಯ ಮೂಲ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಮುಖ್ಯಮಂತ್ರಿ ಹಾಗೂ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ರಾಮಲಿಂಗ ರೆಡ್ಡಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು. ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ಶೀಘ್ರದಲ್ಲೇ ನೀರು ಹರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು.

ಪ್ರಸ್ತುತ ಮಹಾರಾಷ್ಟ್ರ ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಕಾರಣ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನಲ್ಲಿ ಸ್ವಲ್ಪ ಪ್ರಮಾಣದ ವ್ಯತ್ಯಾಸ ಕಂಡುಬಂದಿದ್ದರೂ, ಮುಂಬರುವ ಹಿಂಗಾರು ಹಂಗಾಮಿನ ವೇಳೆಗೆ ಜಲಾಶಯವು ಶೇ.100ರಷ್ಟು ಭರ್ತಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಶಿವಾನಂದ ಪಾಟೀಲ ಹೇಳಿದರು.

ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದಲ್ಲಿ ರೈತರಿಗೆ ಕನಿಷ್ಠ ಒಂದು ಬೆಳೆಗೆ ಬೇಕಾದಷ್ಟು ನೀರು ದೊರೆಯಲಿದ್ದು, ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗುವುದಿಲ್ಲ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು.

ರೈತರ ಹಿತಾಸಕ್ತಿಯನ್ನು ಕಾಪಾಡುವುದು ನಮ್ಮ ಸರ್ಕಾರದ ಹಾಗೂ ನಮ್ಮ ಮೊದಲ ಆದ್ಯತೆ. ರೈತರು ಆತಂಕಪಡುವ ಅಗತ್ಯವಿಲ್ಲ.

ನೀರಾವರಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿ, ಕಾಲುವೆಗಳ ಮೂಲಕ ಸಮಯಕ್ಕೆ ಸರಿಯಾಗಿ ನೀರು ಹರಿಸಲು ಸರ್ಕಾರ ಬದ್ಧವಾಗಿದೆ. ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು, ಎಂದು ಅವರು ಹೇಳಿದರು.

ಈ ಪರಿಶೀಲನಾ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ರಾಮಲಿಂಗಾ ರೆಡ್ಡಿ, ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಪ್ರಮುಖ ಗಣ್ಯರು ಉಪಸ್ಥಿತರಿದ್ದು, ಜಲಾಶಯದ ನಿರ್ವಹಣೆ, ನೀರಿನ ಹಂಚಿಕೆ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಾಲೋಚನೆ ನಡೆಸಿದರು.

ರೈತರ ಹಿತ, ನೀರಿನ ಸಮರ್ಪಕ ಬಳಕೆ ಹಾಗೂ ನೀರಾವರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು, ರಾಜ್ಯದ ಕೃಷಿ ಕ್ಷೇತ್ರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ಮುಂದುವರಿಯಲಿದೆ ಎಂದು ಶಿವಾನಂದ ಪಾಟೀಲ ಪುನರುಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande