ಬೆಂಗಳೂರಿಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಮಧ್ಯಪ್ರದೇಶದ ವ್ಯಕ್ತಿ ಬಂಧನ
ಬೆಂಗಳೂರು, 21 ಜುಲೈ (ಹಿ.ಸ.): ಆ್ಯಂಕರ್: ಮನೆಯಲ್ಲಿ ಸ್ವತಃ ಹ್ಯಾಂಡ್‌ಮೇಡ್ ಗನ್ ಹಾಗೂ ಗುಂಡುಗಳನ್ನು ತಯಾರಿಸಿ ಬೆಂಗಳೂರಿಗೆ ಪೂರೈಸುತ್ತಿದ್ದ ಆರೋಪಿಯನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಜೆನ್ಜಿರ್ ಅಲಿಯಾಸ್ ಸರ್ದ
CCBCrime


ಬೆಂಗಳೂರು, 21 ಜುಲೈ (ಹಿ.ಸ.):

ಆ್ಯಂಕರ್:

ಮನೆಯಲ್ಲಿ ಸ್ವತಃ ಹ್ಯಾಂಡ್‌ಮೇಡ್ ಗನ್ ಹಾಗೂ ಗುಂಡುಗಳನ್ನು ತಯಾರಿಸಿ ಬೆಂಗಳೂರಿಗೆ ಪೂರೈಸುತ್ತಿದ್ದ ಆರೋಪಿಯನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಜೆನ್ಜಿರ್ ಅಲಿಯಾಸ್ ಸರ್ದಾರ್ ಎಂದು ಗುರುತಿಸಲಾಗಿದ್ದು, ಆತನಿಂದ ಹ್ಯಾಂಡ್‌ಮೇಡ್ ಗನ್, ಜೀವಂತ ಗುಂಡುಗಳು ಹಾಗೂ ಗನ್ ತಯಾರಿಕೆಗೆ ಬಳಸುತ್ತಿದ್ದ ವಿವಿಧ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೂರು ತಿಂಗಳ ಹಿಂದೆ ದಾಖಲಾಗಿದ್ದ ಪ್ರಕರಣದಲ್ಲಿ ಇಮ್ರಾನ್ ಎಂಬಾತನನ್ನು ಬಂಧಿಸಿದ ವೇಳೆ, ಬೆಂಗಳೂರಿಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಪ್ರಮುಖ ವ್ಯಕ್ತಿಯಾಗಿ ಜೆನ್ಜಿರ್ ಹೆಸರು ಬೆಳಕಿಗೆ ಬಂದಿತ್ತು. ಇಮ್ರಾನ್ ನೀಡಿದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ, ಇಂದೋರ್‌ನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದೆ.

ಆರೋಪಿ ಬೆಂಗಳೂರಿನ ಜೊತೆಗೆ ಇನ್ನೆಲ್ಲೆಡೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದಾನೆ, ಈ ಅಕ್ರಮ ಜಾಲದಲ್ಲಿ ಮತ್ತಾರ್ಯಾರು ಭಾಗಿಯಾಗಿದ್ದಾರೆ ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande