
ತುಮಕೂರು, 21 ಜುಲೈ (ಹಿ.ಸ.):
ಆ್ಯಂಕರ್:
ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿ ತಾಳೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ ಕಲಿಕೆರೆ ಮತ್ತು ಡೊಂಕಿಹಳ್ಳಿ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಡಿ ಕಲ್ಕೆರೆ ಹೊಸ ಬಡಾವಣೆ
ಗ್ರಾಮದಲ್ಲಿ ಪ್ರಸ್ತುತ ಖಾಸಗಿ ಬೋರ್‌ವೆಲ್‌ನಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಗ್ರಾಮದಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಲು ಕಂಟೆಂಜೆನ್ಸಿ ಆಕ್ಷನ್ ಪ್ಲಾನ್ ನಲ್ಲಿ ಅನುಮೋದನೆಯಾಗಿದ್ದು ಸದ್ಯದಲ್ಲೇ ಕೊಳವೆಬಾವಿ ಕೊರೆಸಲಾಗುವುದು ಎಂದು ಅಧಿಕಾರಿಗಳು ನಿರ್ದೇಶನ ನೀಡಿದರು.
ಈ ಹಿನ್ನೆಲೆಯಲ್ಲಿ ಹೊಸದಾಗಿ ಕೊಳವೆಬಾವಿ ತೊರೆದು ನೀರು ಮತ್ತು ಗುಣಮಟ್ಟ ಪರಿಶೀಲಿಸಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿ, ಅಗತ್ಯ ಮೂಲಸೌಕರ್ಯಗಳನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ಡೋಂಕಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಈಗಾಗಲೇ ಕೊಳವೆಬಾವಿ ಕೊರೆಯಲಾಗಿದ್ದು ಪೈಪ್ಲೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು ತಕ್ಷಣ ಪೈಪ್ಲೈನ್ ಕಾಮಗಾರಿ ಪೂರ್ಣಗೊಳಿಸಿ ನೀರನ್ನು ಒದಗಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಿಪಟೂರು ಉಪ ವಿಭಾಗ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿ , ತಹಸಿಲ್ದಾರ್ , ಸಹಾಯಕ ಕಾರ್ಯಪಾಲಕ ಅಭಿಯಂತರರು , ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.