
ಬೆಂಗಳೂರು, 21 ಜುಲೈ (ಹಿ.ಸ.):
ಆ್ಯಂಕರ್:
ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಪಾದಾಚಾರಿ ಮಾರ್ಗ ತೆರವು ಕಾರ್ಯಾಚರಣೆಗೆ ಸಾರ್ವಜನಿಕರು ಕಡ್ಡಾಯವಾಗಿ ಸಹಕಾರ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ.
ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವುಗೊಳಿಸಲು ತೆರಳಿದ್ದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಫುಟ್ಪಾತ್ ಅಂದರೆ ಏನು? ಅದನ್ನು ಅಂಗಡಿ ಪಾತ್ ಮಾಡಿಕೊಂಡರೆ ಹೇಗೆ? ಎಂದು ಕಡುವಾಗಿ ಪ್ರಶ್ನಿಸಿದ್ದಾರೆ. ಸಾರ್ವಜನಿಕರ ಓಡಾಟಕ್ಕಾಗಿ ಇರುವ ಜಾಗವನ್ನು ಒತ್ತುವರಿ ಮಾಡಿಕೊಳ್ಳುವುದನ್ನು ಕಟುವಾಗಿ ವಿರೋಧಮಾಡಿದ್ದಾರೆ ಅಲ್ಲದೇ ಸರ್ಕಾರಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದಿದ್ದಾರೆ.
ದೇಶದಲ್ಲಿ ಕಾನೂನು ವ್ಯವಸ್ಥೆ ಇದೆ ಎಂದಿರುವ ಅವರು, ಯಾರೇ ಆಗಲಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲು ಕಾನೂನಿನಲ್ಲಿ ಅವಕಾಶವಿಲ್ಲ. ಹಲ್ಲೆ ಮಾಡಿದವರ ವಿರುದ್ಧ ಪೊಲೀಸ್ ಇಲಾಖೆಯು ನಿಯಮಾನುಸಾರ ಕಠಿಣ ಕಾನೂನು ಕ್ರಮ ಜರುಗಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII