ಮದ್ಯ ಕುಡಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಕಾಮುಕರು ಸೇರಿ ಮೂವರ ಬಂಧನ
ದೇವನಹಳ್ಳಿ, 21 ಜುಲೈ (ಹಿ.ಸ.): ಆ್ಯಂಕರ್: ಬಾಲಕಿಗೆ ಮದ್ಯಪಾನ ಮಾಡಿಸಿ ನಿರ್ಮಾಣ ಹಂತದ ಕಟ್ಟಡದಲ್ಲಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ಎಸಗಿದ ದಾರುಣ ಘಟನೆ ನಡೆದಿದೆ. ಈ ಕೃತ್ಯ ಎಸಗಿದ ಇಬ್ಬರು ಕಾಮುಕರು ಹಾಗೂ ಅವರಿಗೆ ಸಾಥ್ ನೀಡಿದ್ದ ಓರ್ವ ಮಹಿಳೆಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜುಲ
ಸಂದರ್ಭಿಕ ಚಿತ್ರ


ದೇವನಹಳ್ಳಿ, 21 ಜುಲೈ (ಹಿ.ಸ.):

ಆ್ಯಂಕರ್:

ಬಾಲಕಿಗೆ ಮದ್ಯಪಾನ ಮಾಡಿಸಿ ನಿರ್ಮಾಣ ಹಂತದ ಕಟ್ಟಡದಲ್ಲಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ಎಸಗಿದ ದಾರುಣ ಘಟನೆ ನಡೆದಿದೆ. ಈ ಕೃತ್ಯ ಎಸಗಿದ ಇಬ್ಬರು ಕಾಮುಕರು ಹಾಗೂ ಅವರಿಗೆ ಸಾಥ್ ನೀಡಿದ್ದ ಓರ್ವ ಮಹಿಳೆಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಜುಲೈ 17ರಂದು ಸಂಜೆ ಮಹಿಳೆಯೊಬ್ಬಳು ಆಟೋದಲ್ಲಿ ಬಾಲಕಿಯನ್ನು ದೇವಸ್ಥಾನಕ್ಕೆಂದು ಕರೆದುಕೊಂಡು ಹೋಗಿ, ಬಳಿಕ ಇಬ್ಬರು ಆರೋಪಿಗಳಿಗೆ ಆ ಬಾಲಕಿಯನ್ನು ಒಪ್ಪಿಸಿದ್ದಳು. ನಂತರ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ರಾತ್ರಿಯಿಡೀ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಬೆಳಿಗ್ಗೆ ಬಾಲಕಿಯನ್ನು ಮನೆ ಬಳಿ ಬಿಟ್ಟು, ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಪರಾರಿಯಾಗಿದ್ದರು.

ಬಳಿಕ ಬಾಲಕಿ ರಾತ್ರಿ ಮನೆಗೆ ಬಾರದಿರುವುದನ್ನು ಪ್ರಶ್ನಿಸಿದ ತಾಯಿಗೆ ಸಂತ್ರಸ್ತೆ ಮಗಳ ನಡೆದ ಘಟನೆ ವಿವರಿಸಿದ್ದಾಳೆ. ತಕ್ಷಣವೇ ಅಪ್ರಾಪ್ತೆ ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ದೇವನಹಳ್ಳಿ ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande