
ಕೊಪ್ಪಳ, 21 ಜುಲೈ (ಹಿ.ಸ.)
ಆ್ಯಂಕರ್: ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಗಸ್ಟ್ 01 ರಂದು ಆಚರಿಸಲಾಗುವ ವ್ಯಸನ ಮುಕ್ತ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಜುಲೈ 22 ರಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಆಗಮಿಸಲು ಕೋರಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್