ಕೊಪ್ಪಳ : ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ
ಕೊಪ್ಪಳ, 21 ಜುಲೈ (ಹಿ.ಸ.) ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ನೋಂದಾಯಿತ ಸಂಘ-ಸಂಸ್ಥೆಗಳಿಗೆ 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ಸಾಂಸ್ಕೃತಿಕ ವಾತಾವರಣ
ಕೊಪ್ಪಳ : ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ


ಕೊಪ್ಪಳ, 21 ಜುಲೈ (ಹಿ.ಸ.)

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ನೋಂದಾಯಿತ ಸಂಘ-ಸಂಸ್ಥೆಗಳಿಗೆ 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನಲ್ಲಿ ಸಾಂಸ್ಕೃತಿಕ ವಾತಾವರಣ ಉಂಟುಮಾಡುವಲ್ಲಿ ನಿರಂತರ ಚಟುವಟಿಕೆಗಳ ಮೂಲಕ ಕ್ರಿಯಾಶೀಲವಾಗಿರುವ ಕೊಪ್ಪಳ ಜಿಲ್ಲೆಯ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷ ಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ ಅಥವಾ ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹಿಸಲು ಧನಸಹಾಯ ನೀಡಲಾಗುತ್ತಿದ್ದು, ಆಸಕ್ತರು ಸೇವಾಸಿಂಧು ಮುಖಾಂತರ ಆಗಸ್ಟ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದು. ಧನಸಹಾಯ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.kannadasiri.karnataka.gov.in ನ್ನು ಅಥವಾ ದೂ.ಸಂ: 080-24410574, 080-22213530, 080-22241325 ಮೊ.ಸಂ: 9986837037 ಗಳನ್ನು ಸಂಪರ್ಕಿಸಬಹುದು ಹಾಗೂ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಮತ್ತು ಜಿಲ್ಲಾ ವ್ಯವಸ್ಥಾಪಕರು ಸೇವಾಸಿಂಧು ಇವರನ್ನು ಸಂಪರ್ಕಿಸಬಹುದಾಗಿದೆ.

ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಸೇವಾಸಿಂಧುವಿನ ಮೂಲಕ ಸಲ್ಲಿಕೆಯಾಗದ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande