ಸಿಂದಗಿಯಲ್ಲಿ 21ನೇ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ವಿಜಯಪುರ, 21 ಜುಲೈ (ಹಿ.ಸ.) ಆ್ಯಂಕರ್ ::ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜುಲೈ 21 ಹಾಗೂ 22ರಂದು ಎರಡು ದಿನಗಳ ಕಾಲ ನಡೆಯಲಿರುವ 21ನೇ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯಾದ್ಯಂತದ ಕನ್ನಡಾಭಿಮಾನಿಗಳು, ಸಾಹಿತಿಗಳು, ಕವಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನ
ಜೆಸ್ಸ್


ವಿಜಯಪುರ, 21 ಜುಲೈ (ಹಿ.ಸ.)

ಆ್ಯಂಕರ್ ::ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜುಲೈ 21 ಹಾಗೂ 22ರಂದು ಎರಡು ದಿನಗಳ ಕಾಲ ನಡೆಯಲಿರುವ 21ನೇ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯಾದ್ಯಂತದ ಕನ್ನಡಾಭಿಮಾನಿಗಳು, ಸಾಹಿತಿಗಳು, ಕವಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಮ್ಮೇಳನದ ಆಯೋಜಕರು ಹಾಗೂ ಶಾಸಕ ಅಶೋಕ್ ಮನಗೂಳಿ ಮನವಿ ಮಾಡಿದ್ದಾರೆ.

ಸಿಂದಗಿಯ ಎಚ್.ಜಿ. ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡಿನ ಪರಂಪರೆಯನ್ನು ಪ್ರತಿಬಿಂಬಿಸುವ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳು, ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಹಿತ್ಯ ಚರ್ಚೆಗಳು ಹಾಗೂ ಗಣ್ಯ ಸಾಹಿತಿಗಳ ಉಪನ್ಯಾಸಗಳು ನಡೆಯಲಿವೆ.

ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಹತ್ವದ ವೇದಿಕೆಯಾಗಿದ್ದು, ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶವನ್ನು ಹೊಂದಿದೆ. ಯುವಜನರಲ್ಲಿ ಕನ್ನಡದ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಸಾಹಿತ್ಯಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಕಾರ್ಯವನ್ನು ಈ ಸಮ್ಮೇಳನ ಮಾಡಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ ಸಮ್ಮೇಳನಕ್ಕೆ ಶೋಭೆ ತಂದು, ಕನ್ನಡವನ್ನು ಬೆಳಸಿ, ಹರಸಿ, ಉಳಿಸುವ ಸಂಕಲ್ಪಕ್ಕೆ ಕೈಜೋಡಿಸಬೇಕು ಎಂದು ಸಾರ್ವಜನಿಕರಿಗೆ ಆತ್ಮೀಯ ಆಹ್ವಾನ ನೀಡಲಾಗಿದೆ.

ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಕನ್ನಡಾಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಸಿಂದಗಿ ನಗರವು ಸಾಹಿತ್ಯದ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಕನ್ನಡದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಈ ಮಹತ್ವದ ಸಮ್ಮೇಳನದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಸಂಘಟಕರು ಮತ್ತೊಮ್ಮೆ ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande