
ನವದೆಹಲಿ, ಜುಲೈ 21(ಹಿ.ಸ.):
ಆ್ಯಂಕರ್:
ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಅಂಗವಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಲೋಕಸಭಾಧ್ಯಕ್ಷ ಓಂ ಬಿರ್ಲಾ ಎಕ್ಸ್‌ನಲ್ಲಿ ಶುಭಾಶಯ ತಿಳಿಸಿ, ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃತ್ಪೂರ್ವಕ ಜನ್ಮದಿನದ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧ ಜೀವನ ನೀಡಲಿ ಎಂದು ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಎಕ್ಸ್‌ನಲ್ಲಿ ಶುಭಾಶಯ ಕೋರಿ, ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ಹೊಂದಿರಲಿ ಎಂದು ಹಾರೈಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಶುಭಾಶಯ ಸಲ್ಲಿಸಿ, ಖರ್ಗೆ ಅವರು ದೀರ್ಘಕಾಲ ಆರೋಗ್ಯವಂತರಾಗಿ ಸುಖಸಮೃದ್ಧಿಯಿಂದ ಬದುಕಲಿ ಎಂದು ಹಾರೈಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.