ಸಂಸತ್ ಭವನದ ಮೇಲೆ ಕಲ್ಲುತೂರಾಟ: ಪ್ರಜಾಪ್ರಭುತ್ವದ ಮೇಲಿನ ದಾಳಿ: ರವಿಕುಮಾರ್ ಆಕ್ರೋಶ
ಬೆಂಗಳೂರು, 21 ಜುಲೈ (ಹಿ.ಸ.): ಆ್ಯಂಕರ್: ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ, ಆದರೆ ಸಂಸತ್ ಭವನದ ಮೇಲೆ ಕಲ್ಲು ತೂರಾಟ ನಡೆಸಿರುವುದು ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದ
MLC-N-Ravikumar


ಬೆಂಗಳೂರು, 21 ಜುಲೈ (ಹಿ.ಸ.):

ಆ್ಯಂಕರ್:

ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ, ಆದರೆ ಸಂಸತ್ ಭವನದ ಮೇಲೆ ಕಲ್ಲು ತೂರಾಟ ನಡೆಸಿರುವುದು ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯು ಎಂದಿಗೂ ವಿದ್ಯಾರ್ಥಿಗಳು, ರೈತರು ಹಾಗೂ ವಿವಿಧ ಸಂಘಟನೆಗಳ ಶಾಂತಿಯುತ ಪ್ರತಿಭಟನೆಗಳಿಗೆ ವಿರೋಧ ಮಾಡಿಲ್ಲ. ಆದರೆ, ಇತ್ತೀಚಿನ ಪ್ರತಿಭಟನೆಯ ಹೆಸರಿನಲ್ಲಿ ಪಾರ್ಲಿಮೆಂಟ್ ಮೇಲೆ ಕಲ್ಲುಗಳಿಂದ ದಾಳಿ ಮಾಡಲಾಗಿದೆ. ಈ ದುಷ್ಕೃತ್ಯದಲ್ಲಿ 150ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಾಂತಿಯುತ ಹೋರಾಟದ ಮುಖಗವಚ ಧರಿಸಿ ಹಿಂಸಾಚಾರ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ದ್ರೋಹವಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ರವಿಕುಮಾರ್ ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande