ಬ್ರಿಟನ್ನ ನೂತನ ಪ್ರಧಾನಿಗೆ ಮೋದಿ ಅಭಿನಂದನೆ
ನವದೆಹಲಿ, ಜುಲೈ 21(ಹಿ.ಸ.): ಆ್ಯಂಕರ್: ಬ್ರಿಟನ್‌ನ ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆಂಡಿ ಬರ್ನ್‌ಹ್ಯಾಮ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, ಭಾರತ ಮತ್ತು ಬ್ರಿಟನ್ ಹಂಚಿಕೊಂಡಿರುವ ಪ್ರ
प्रधानमंत्री नरेन्द्र मोदी (फाइल फोटो)


ನವದೆಹಲಿ, ಜುಲೈ 21(ಹಿ.ಸ.):

ಆ್ಯಂಕರ್:

ಬ್ರಿಟನ್‌ನ ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆಂಡಿ ಬರ್ನ್‌ಹ್ಯಾಮ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, ಭಾರತ ಮತ್ತು ಬ್ರಿಟನ್ ಹಂಚಿಕೊಂಡಿರುವ ಪ್ರಜಾಪ್ರಭುತ್ವದ ಮೌಲ್ಯಗಳು ಉಭಯ ದೇಶಗಳ ಸಂಬಂಧವನ್ನು ಮತ್ತಷ್ಟು ಬಲಪಡಿಸಿವೆ ಎಂದು ತಿಳಿಸಿದ್ದಾರೆ.

ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ರಕ್ಷಣಾ ಸಹಕಾರ ಹಾಗೂ ಜನರ ನಡುವಿನ ಬಾಂಧವ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಉಭಯ ದೇಶಗಳು ವ್ಯಾಪಕ ಸಹಕಾರ ಹೊಂದಿವೆ. ಈ ತಿಂಗಳಿನಿಂದ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿಇಟಿಎ) ಜಾರಿಯಾಗುತ್ತಿರುವುದರಿಂದ ದ್ವಿಪಕ್ಷೀಯ ಸಹಭಾಗಿತ್ವ ಇನ್ನಷ್ಟು ಬಲಗೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.

ಭಾರತ–ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಿ, ಉಭಯ ರಾಷ್ಟ್ರಗಳ ‘ಹಂಚಿಕೆಯ ದೃಷ್ಟಿಕೋನ–2035’ ಗುರಿಯನ್ನು ಸಾಕಾರಗೊಳಿಸಲು ಆಂಡಿ ಬರ್ನ್‌ಹ್ಯಾಮ್ ಅವರೊಂದಿಗೆ ಕಾರ್ಯನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande