ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸಿದ್ದ
ಬಳ್ಳಾರಿ, 21 ಜುಲೈ (ಹಿ.ಸ.) ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು ಮಳೆ ತೀವ್ರ ಕ್ಷೀಣಿಸಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತವು ರೈತರೊಂದಿಗೆ ಸದಾ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ
ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸಿದ್ದ


ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸಿದ್ದ


ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸಿದ್ದ


ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸಿದ್ದ


ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸಿದ್ದ


ಬಳ್ಳಾರಿ, 21 ಜುಲೈ (ಹಿ.ಸ.)

ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು ಮಳೆ ತೀವ್ರ ಕ್ಷೀಣಿಸಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತವು ರೈತರೊಂದಿಗೆ ಸದಾ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ ಅವರು ತಿಳಿಸಿದ್ದಾರೆ.

ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಳೆ ಕೊರತೆ ಹಿನ್ನಲೆ ಕುಡಿಯುವ ನೀರು ಹಾಗೂ ಇತರೆ ಸಮಸ್ಯೆಗಳ ಕುರಿತು ರೈತರೊಂದಿಗೆ ಚರ್ಚಿಸಲು ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

`ಸೂಪರ್ ಎಲ್ ನಿನೋ’ ಪ್ರಭಾವದಿಂದಾಗಿ ನೈರುತ್ಯ ಮುಂಗಾರು ಮಳೆಯ ಅಭಾವ ಉಂಟಾಗಿದ್ದು, ಇಡೀ ರಾಜ್ಯದಲ್ಲಿ ಮಳೆ ಕೊರತೆ ಎದ್ದು ಕಾಣುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 72 ಟಿ.ಎಂ.ಸಿ ನೀರಿತ್ತು. ಪ್ರಸ್ತುತ ಜಲಾಶಯದಲ್ಲಿ ಕೇವಲ 26 ಟಿ.ಎಂ.ಸಿ ನೀರು ಮಾತ್ರ ಸಂಗ್ರಹವಾಗಿದೆ.

ಮಲೆನಾಡು ಅಚ್ಚು-ಕಟ್ಟು ಪ್ರದೇಶದಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ದಿನಕ್ಕೆ ಸುಮಾರು 3,500 ಕ್ಯೂಸೆಕ್ ಒಳಹರಿವು ದಾಖಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಳಹರಿವು 15 ರಿಂದ 20 ಸಾವಿರ ಕ್ಯೂಸೆಕ್ಗೆ ಏರಿಕೆಯಾಗಿ ಸತತವಾಗಿ ಹರಿದುಬಂದರೆ ಮಾತ್ರ ಪರಿಸ್ಥಿತಿ ಸುಧಾರಿಸಲಿದೆ ಎಂದು ತಿಳಿಸಿದರು.

ನೀರಿನ ಅಭಾವ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯು ರೈತರಿಗೆ ವಿಶೇಷ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಆಗಸ್ಟ್ ತಿಂಗಳವರೆಗೆ ಕಡಿಮೆ ತೇವಾಂಶದಲ್ಲಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಸಾಂಪ್ರದಾಯಿಕ ಬೆಳೆಗಳನ್ನೇ ನೆಚ್ಚಿಕೊಳ್ಳದೆ, ಪ್ರಸ್ತುತ ಹವಾಮಾನಕ್ಕೆ ಸೂಕ್ತವಾದ ಬೆಳೆಗಳನ್ನು ಬೆಳೆಯಬೇಕು ಎಂದು ರೈತರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಭೆ ನಡೆಸಿ ನೀಡಿರುವ ನಿರ್ದೇಶನದಂತೆ ಜಿಲ್ಲಾಡಳಿತ ಮುಂದಿನ ಒಂದು ವಾರದಲ್ಲಿ ನೇರವಾಗಿ ರೈತರ ಜಮೀನುಗಳಿಗೆ ಭೇಟಿ ನೀಡಲಿದೆ. ರೈತರ ನೈಜ ಕಷ್ಟ-ನಷ್ಟಗಳನ್ನು ಪರಿಶೀಲಿಸಿ, ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಜಮೀನುಗಳಿಗೆ ಭೇಟಿ ನೀಡುವಾಗ ಯಾವ ರೀತಿ ಪರಿಶೀಲನೆ ನಡೆಸಬೇಕು ಎಂಬ ಕುರಿತು ಅಧಿಕಾರಿಗಳಿಗೆ ಈಗಾಗಲೇ ವಿಶೇಷ ಕಾರ್ಯಾಗಾರ ನಡೆಸಿ ತರಬೇತಿ ನೀಡಲಾಗಿದೆ ಎಂದರು.

ರೈತರ ಕಷ್ಟ-ನಷ್ಟಗಳನ್ನು ಆಲಿಸಿ, ಸೂಕ್ತ ಪರಿಹಾರ ಕಂಡುಕೊಳ್ಳುವುದೇ ಜಿಲ್ಲಾಡಳಿತದ ಮುಖ್ಯ ಆದ್ಯತೆ. ರೈತರ ಅಹವಾಲು ಮತ್ತು ಸಲಹೆಗಳನ್ನು ಆಲಿಸಿ ತಕ್ಷಣದ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಹಾಗೂ ಜಿಲ್ಲಾಡಳಿತವು ಈ ಬರವನ್ನ ಎದುರಿಸಲು ಸಂಪೂರ್ಣ ಸಿದ್ಧವಾಗಿದ್ದು, ರೈತರೊಂದಿಗೆ ಸದಾ ಇರಲಿದೆ ಎಂದು ಅಭಯ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು, ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಆರ್ಡಿಪಿಆರ್ ವತಿಯಿಂದ ತುರ್ತು ಕುಡಿಯುವ ನೀರಿನ ಕಾಮಗಾರಿಗಳು, ಪೈಪ್ಲೈನ್ ರಿಪೇರಿ, ಫ್ಲಷಿಂಗ್ ಹಾಗೂ ರೀ-ಡ್ರಿಲ್ಲಿಂಗ್ಗಾಗಿ ಅಗತ್ಯ ಹಣ ಬಿಡುಗಡೆಯಾಗಿದೆ. ಅನುದಾನದ ಕೊರತೆ ಇಲ್ಲ.

ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಎದುರಾದರೆ ಸಾರ್ವಜನಿಕರು ಹಾಗೂ ರೈತ ಮುಖಂಡರು ನೇರವಾಗಿ ಆರ್ಡಬ್ಲ್ಯೂಎಸ್ ಅಥವಾ ಜಿಲ್ಲಾ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸಮಸ್ಯೆ ಇರುವಲ್ಲಿ ತಕ್ಷಣವೇ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಹರಿಸಲಿದೆ ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು, ಮಳೆ ಅಭಾವ ಹಾಗೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವ ಹಿನ್ನೆಲೆಯಲ್ಲಿ, ಹೆಚ್ಚಿನ ನೀರು ಬೇಡುವ ಭತ್ತ ಮತ್ತು ಕಬ್ಬಿನ ಬದಲು ಸಜ್ಜೆ, ನವಣೆ, ಅರ್ಕ ಹಾಗೂ ಶೇಂಗಾದಂತಹ ಪರ್ಯಾಯ ಬೆಳೆಗಳನ್ನು ಬೆಳೆಯಬೇಕು. ರೈತರು ಕಡ್ಡಾಯವಾಗಿ 'ಬೆಳೆ ವಿಮೆ' ಮಾಡಿಸಿಕೊಳ್ಳಬೇಕು. ವಿಮೆ ನೋಂದಣಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ್ ಕೋಟಿಮನಿ ಅವರು, ಈಗಾಗಲೇ ಮೆಣಸಿಕಾಯಿ ಬೆಳೆ ಹಾಕಿರುವ ರೈತರು ಕೂಡಲೇ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಹೊಸದಾಗಿ ಬೆಳೆ ವಿಸ್ತರಣೆ ಮಾಡುವ ಅಥವಾ ಹನಿ ನೀರಾವರಿ ಅಳವಡಿಸಿಕೊಳ್ಳುವ ರೈತರಿಗೆ ಶೇಕಡಾ 90 ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಒಣ ಹುಲ್ಲಿನ ಅಭಾವ ಉಂಟಾಗುವ ಸಾಧ್ಯತೆಯಿದೆ. ಜಾನುವಾರುಗಳ ಹಿತದೃಷ್ಟಿಯಿಂದ ರೈತರು ತಮ್ಮ ಜಮೀನಿನಲ್ಲಿ ಹಸಿರು ಮೇವು ಬೆಳೆದುಕೊಳ್ಳುವುದು ಅಗತ್ಯ. ಪಶುಸಂಗೋಪನೆ ಮತ್ತು ಪಶುಆಸ್ಪತ್ರೆ ಇಲಾಖೆಯಿಂದ ಅಗತ್ಯವಿರುವ ಬೀಜದ ಕಿಟ್ಗಳನ್ನು ಪೂರೈಸಲಾಗುವುದು. ರೈತರು ಪಶುಸಖಿಯರನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್.ಕೆ ಹೇಳಿದರು.

ಇದೇ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಿದರು ಹಾಗೂ ಮನವಿ ಸಲ್ಲಿಸಿದರು. ರೈತರೊಂದಿಗೆ ಜಿಲ್ಲಾಡಳಿತ ಸದಾ ಸಿದ್ಧವಿದೆ ಎಂದು ಮನವರಿಕೆ ಮಾಡಿಕೊಡಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande