ನೀಟ್ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ: ಎನ್ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ
ನವದೆಹಲಿ, ಜುಲೈ 21(ಹಿ.ಸ.): ಆ್ಯಂಕರ್: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಎರಡನೇ ದಿನ ಸಂಸತ್ ಭವನದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡ
संसदीय कार्यमंत्री किरेन रीजीजू


ನವದೆಹಲಿ, ಜುಲೈ 21(ಹಿ.ಸ.):

ಆ್ಯಂಕರ್:

ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನದ ಎರಡನೇ ದಿನ ಸಂಸತ್ ಭವನದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ‘ಮಂಗಳ ಮಿಲನ’ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.

ಸಭೆಯ ಬಳಿಕ ಮಾಹಿತಿ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ತಕ್ಷಣ ಸರ್ಕಾರ ಕ್ರಮ ಕೈಗೊಂಡಿದ್ದು, 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಮರುಪರೀಕ್ಷೆ ನಡೆಸಿ, ಯಾವುದೇ ವಿಳಂಬವಿಲ್ಲದೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಇನ್ನಷ್ಟು ಕಠಿಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಒಂದು ರಾಜ್ಯ ಅಥವಾ ಕೇಂದ್ರ ಸರ್ಕಾರದ ಸಮಸ್ಯೆಯಲ್ಲ. ಇಂತಹ ಅಕ್ರಮ ನಡೆಯುವ ಎಲ್ಲ ರಾಜ್ಯಗಳೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಇದರಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ.

ನೀಟ್ ವಿಷಯದಲ್ಲಿ ರಾಜಕೀಯವನ್ನು ಬದಿಗಿಟ್ಟು ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಯುವಜನರ ಭವಿಷ್ಯಕ್ಕೆ ಧಕ್ಕೆಯಾಗದಂತೆ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಎಲ್ಲರೂ ಸಹಕರಿಸಬೇಕು ಎಂದು ಪ್ರಧಾನಿ ಹೇಳಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ಸರ್ಕಾರದ ನಿಲುವನ್ನು ಪರಿಣಾಮಕಾರಿಯಾಗಿ ಮಂಡಿಸಿ, ಸದನದ ಕಲಾಪ ಸುಗಮವಾಗಿ ನಡೆಯಲು ಸಹಕರಿಸುವಂತೆ ಪ್ರಧಾನಿ ಎನ್‌ಡಿಎ ಸಂಸದರಿಗೆ ಕರೆ ನೀಡಿದರು.

ಸಭೆಯ ಬಳಿಕ ಮಾತನಾಡಿದ ಬಿಜೆಪಿ ಸಂಸದೆ ಕಂಗನಾ ರಣಾವತ್, ಪ್ರಧಾನಿ ಸಂಸದರಿಗೆ ಹಲವು ಮಹತ್ವದ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದ್ದು, ಯುವಜನರ ಆಶೋತ್ತರಗಳಿಗೆ ನ್ಯಾಯ ಒದಗಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಯುವಕರು ಸಾಧಿಸಿರುವ ಯಶಸ್ಸುಗಳಿಗೆ ಸಮರ್ಪಕ ಪ್ರಚಾರ ಸಿಗುತ್ತಿಲ್ಲ ಎಂಬ ಕಳವಳ ವ್ಯಕ್ತಪಡಿಸಿದ ಪ್ರಧಾನಿ, ಆ ಸಾಧನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ಸಂಸದರಿಗೆ ಸೂಚಿಸಿದ್ದಾರೆ ಎಂದು ಹೇಳಿದರು

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande