ಶಿವಶರಣ ಹಡಪದ ಅಪ್ಪಣ್ಣ ಜಯಂತಿ; ಅರ್ಥಪೂರ್ಣ ಆಚರಣೆ ಸಿದ್ಧತೆ
ಬಳ್ಳಾರಿ, 21 ಜುಲೈ (ಹಿ.ಸ.) ಆ್ಯಂಕರ್: ಜುಲೈ 29 ರಂದು ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ ವಿಶ್ವಜೀತ್ ಮೆಹೆತಾ ಅವರು ಹೇಳಿದರು. ನಗರದ ಹಳೆಯ ಜಿಲ್ಲಾಧಿ
ಶಿವಶರಣ ಹಡಪದ ಅಪ್ಪಣ್ಣ ಜಯಂತಿ; ಅರ್ಥಪೂರ್ಣ ಆಚರಣೆ ಸಿದ್ಧತೆ


ಶಿವಶರಣ ಹಡಪದ ಅಪ್ಪಣ್ಣ ಜಯಂತಿ; ಅರ್ಥಪೂರ್ಣ ಆಚರಣೆ ಸಿದ್ಧತೆ


ಶಿವಶರಣ ಹಡಪದ ಅಪ್ಪಣ್ಣ ಜಯಂತಿ; ಅರ್ಥಪೂರ್ಣ ಆಚರಣೆ ಸಿದ್ಧತೆ


ಶಿವಶರಣ ಹಡಪದ ಅಪ್ಪಣ್ಣ ಜಯಂತಿ; ಅರ್ಥಪೂರ್ಣ ಆಚರಣೆ ಸಿದ್ಧತೆ


ಬಳ್ಳಾರಿ, 21 ಜುಲೈ (ಹಿ.ಸ.)

ಆ್ಯಂಕರ್: ಜುಲೈ 29 ರಂದು ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ ವಿಶ್ವಜೀತ್ ಮೆಹೆತಾ ಅವರು ಹೇಳಿದರು.

ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶಿಷ್ಠಾಚಾರದನ್ವಯ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಅಂದು ಬೆಳಿಗ್ಗೆ 09.30 ಗಂಟೆಗೆ ಮುನಿಸಿಪಲ್ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ, ಸ್ಟೇಷನ್ ರಸ್ತೆ ಮೂಲಕ ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣದವರೆಗೆ ನಡೆಯಲಿದೆ. ಬಳಿಕ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವಿವಿಧ ಇಲಾಖೆಗಳ ಅಧಿಕಾರಿ- ಸಿಬ್ಬಂದಿ ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಜಯಂತಿ ಮೆರವಣಿಗೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನು ನಿಯೋಜಿಸಲಾಗುವುದು. ಮೆರವಣಿಗೆಯ ಹಾದಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು. ವೇದಿಕೆ ಕಾರ್ಯಕ್ರಮದಲ್ಲಿ ಸ್ವಚ್ಛತೆ ಸೇರಿದಂತೆ ಹಲವು ಕಾರ್ಯಗಳನ್ನು ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬ್ಯಾನರ್ ಅಳವಡಿಕೆ ಕುರಿತಂತೆ ಮಹಾನಗರ ಪಾಲಿಕೆ ವತಿಯಿಂದ ಕಡ್ಡಾಯ ಅನುಮತಿ ಪಡೆಯಬೇಕು. ಪಟಾಕಿ, ಶಬ್ದವುಳ್ಳ ಧ್ವನಿವರ್ಧಕಗಳ ಬಳಕೆ ನಿಷೇಧಿಸಲಾಗಿದೆ. ಶರಣರ ಶಾಂತಿ ತತ್ವಗಳ ಕುರಿತು ನುರಿತರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ವಚನ ಸಂಗೀತ ಇರಲಿದೆ ಎಂದರು.

ಸಭೆಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಮುಖಂಡರು ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಡಿಡಿಪಿಐ, ಡಿಡಿಪಿಯು ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande