ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: 5 ಮಂದಿ ವಶಕ್ಕೆ, ಸಚಿವ ಕೃಷ್ಣ ಬೈರೇಗೌಡ ಕಠಿಣ ಎಚ್ಚರಿಕೆ
ಬೆಂಗಳೂರು, 21 ಜುಲೈ (ಹಿ.ಸ.): ಆ್ಯಂಕರ್: ಸುರಕ್ಷಿತ ಪಾದಾಚಾರಿ ಮಾರ್ಗ ತೆರವುಗೊಳಿಸುವ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ ಘಟನೆಯನ್ನು ಸಚಿವ ಕೃಷ್ಣ ಬೈರೇಗೌಡ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀ
Krishna Byre Gowda


ಬೆಂಗಳೂರು, 21 ಜುಲೈ (ಹಿ.ಸ.):

ಆ್ಯಂಕರ್:

ಸುರಕ್ಷಿತ ಪಾದಾಚಾರಿ ಮಾರ್ಗ ತೆರವುಗೊಳಿಸುವ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ ಘಟನೆಯನ್ನು ಸಚಿವ ಕೃಷ್ಣ ಬೈರೇಗೌಡ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಕರ್ನಾಟಕ ಸೇನೆ ಸಂಘಟನೆಯ ಹೆಸರಿನಲ್ಲಿ ಕೃತ್ಯ ಎಸಗಿರುವ ಆರೋಪಿಗಳ ಪೈಕಿ ಈಗಾಗಲೇ 5 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಿಬಿಎಂಪಿ ವತಿಯಿಂದ ಪಾದಾಚಾರಿ ಮಾರ್ಗಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ, ಬಸವರಾಜ್ ಪಡುಕೋಟೆ ಹಾಗೂ ಆತನ ಸಹಚರರು ಸಾರ್ವಜನಿಕ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ಕುರಿತು ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ, ಬದಲಿಗೆ ಸಮಾಜಘಾತುಕ ಶಕ್ತಿಗಳು. ಕಾನೂನು ಪಾಲನೆ ಮಾಡುತ್ತಿರುವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ಗಂಭೀರ ಅಪರಾಧ. ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ರೀತಿಯಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪೊಲೀಸರು ಈಗಾಗಲೇ 5 ಜನರನ್ನು ವಶಕ್ಕೆ ಪಡೆದಿದ್ದು, ಪ್ರಮುಖ ಸೂತ್ರಧಾರ ಬಸವರಾಜ್ ಪಡುಕೋಟೆ ಬಂಧನಕ್ಕೆ ಬಲೆ ಬೀಸಿದ್ದಾರೆ. ಎಲ್ಲಾ ಆರೋಪಿಗಳ ಮೇಲೆಯೂ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande