
ಬೆಂಗಳೂರು, 21 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಖಾಲಿ ಇರುವ 20 ಸಚಿವ ಸ್ಥಾನಗಳ ಭರ್ತಿಗಾಗಿ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸಲು ನಾಯಕರು ತೆರಳಿದ್ದಾರೆ. ಸಂಪುಟದ 20 ಸ್ಥಾನಗಳಿಗಾಗಿ 40ಕ್ಕೂ ಹೆಚ್ಚು ಆಕಾಂಕ್ಷಿಗಳು ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದು, ನಾಯಕರ ನಡುವೆ ಪ್ರತ್ಯೇಕ ಪಟ್ಟಿಗಳ ಜಟಾಪಟಿ ಏರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಅಂತಿಮ ಪಟ್ಟಿ ರೂಪುಗೊಳ್ಳಲಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII