
ಮೈಸೂರು, 21 ಜುಲೈ (ಹಿ.ಸ.):
ಆ್ಯಂಕರ್:
ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ ಕಾಮುಕನನ್ನು ಸಾರ್ವಜನಿಕರು ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಘಾತಕಾರಿ ಘಟಣೆ ನಡೆದಿದೆ.
ಬಂಧಿತ ಆರೋಪಿಯನ್ನು 23 ವರ್ಷದ ಸುರೇಶ್ ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ಎಂದಿನಂತೆ ದಿನಗೂಲಿ ಕೆಲಸಕ್ಕೆ ತೆರಳಿದ್ದ ವೇಳೆ, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಆರೋಪಿ ಸುರೇಶ್ ಮನೆಗೆ ನುಗ್ಗಿದ್ದಾನೆ. ಬಳಿಕ ಬಾಲಕಿ ಮೇಲೆ ದೌರ್ಜನ್ಯವೆಸಗಲು ಯತ್ನಿಸಿದ್ದಾನೆ.
ಆರೋಪಿಯ ಕೃತ್ಯದಿಂದ ಬೆಚ್ಚಿಬಿದ್ದ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಬಾಲಕಿಯ ಕಿರುಚಾಟ ಕೇಳಿ ತಕ್ಷಣವೇ ಎಚ್ಚೆತ್ತ ಅಕ್ಕಪಕ್ಕದ ಮನೆಯವರು ಮನೆಗೆ ಧಾವಿಸಿಬಂದಿದ್ದಾರೆ. ಕೂಡಲೇ ಸ್ಥಳೀಯರು ಆರೋಪಿಯನ್ನು ಸ್ಥಳದಲ್ಲೇ ಹಿಡಿದು ಥಳಿಸಿದ್ದಾರೆ, ಬಳಿಕ ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII