ಹೈಕೋರ್ಟ್ ರಿಜಿಸ್ಟ್ರಾರ್ ನಿರ್ಲಕ್ಷ್ಯ ಖಂಡಿಸಿ ಬೆಂಗಳೂರು ವಕೀಲರ ಸಂಘದಿಂದ ಧರಣಿ
ಬೆಂಗಳೂರು, 22 ಜುಲೈ (ಹಿ.ಸ.) ಆ್ಯಂಕರ್: ವಕೀಲರು ನಿತ್ಯ ಎದುರಿಸುತ್ತಿರುವ ವೃತ್ತಿಪರ ಹಾಗೂ ದೈನಂದಿನ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿರುವ ಹೈಕೋರ್ಟ್ ರಿಜಿಸ್ಟ್ರಾರ್ ಮತ್ತು ಆಡಳಿತ ಮಂಡಳಿಯ ಧೋರಣೆಯನ್ನು ವಿರೋಧಿಸಿ, ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಇಂದು ಕರ್ನಾಟಕ ಉಚ್ಚ ನ್ಯಾ
Advocates-Protest


ಬೆಂಗಳೂರು, 22 ಜುಲೈ (ಹಿ.ಸ.)

ಆ್ಯಂಕರ್:

ವಕೀಲರು ನಿತ್ಯ ಎದುರಿಸುತ್ತಿರುವ ವೃತ್ತಿಪರ ಹಾಗೂ ದೈನಂದಿನ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿರುವ ಹೈಕೋರ್ಟ್ ರಿಜಿಸ್ಟ್ರಾರ್ ಮತ್ತು ಆಡಳಿತ ಮಂಡಳಿಯ ಧೋರಣೆಯನ್ನು ವಿರೋಧಿಸಿ, ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂಭಾಗದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕೋರ್ಟ್ ಕಲಾಪಗಳ ತಾಂತ್ರಿಕ ಬೇಡಿಕೆಗಳು, ಪ್ರಕರಣಗಳ ಲಿಸ್ಟಿಂಗ್ ಗೊಂದಲಗಳು ಹಾಗೂ ರಿಜಿಸ್ಟ್ರಿ ವಿಭಾಗದ ಅತಿಯಾದ ವಿಳಂಬ ನೀತಿಯಿಂದ ವಕೀಲರು ಪರದಾಡುವಂತಾಗಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಆಡಳಿತ ವಿಭಾಗ ಸ್ಪಂದಿಸದ ಕಾರಣ, ವಕೀಲರ ಹಿತರಕ್ಷಣೆಗಾಗಿ ನ್ಯಾಯಾಲಯದ ಮುಖ್ಯ ಮುಂಭಾಗದಲ್ಲೇ ಧರಣಿ ಕೂತು ಆಕ್ರೋಶ ವ್ಯಕ್ತಪಡಿಸಲಾಯಿತು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಹಾಗೂ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್, ಖಜಾಂಚಿ ಶ್ವೇತಾ ರವಿಶಂಕರ್ ಸೇರಿದಂತೆ ನೂರಾರು ವಕೀಲರು ಪಾಲ್ಗೊಂಡಿದ್ದರು. ಸಮಸ್ಯೆಗಳಿಗೆ ತಕ್ಷಣವೇ ನ್ಯಾಯಯುತ ಪರಿಹಾರ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande