
ಬೆಂಗಳೂರು, 22 ಜುಲೈ (ಹಿ.ಸ.)
ಆ್ಯಂಕರ್:
ಕೆಪಿಸಿಸಿ ಕಚೇರಿ ಬಳಿ ತಮ್ಮ ಮೇಲೆ ನಡೆದ ಮೊಟ್ಟೆ ಹಾಗೂ ದಾಳಿಯನ್ನು ಖಂಡಿಸಿ ಬಿಜೆಪಿ ನಾಯಕರು ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಿಂದ ಕಾಲ್ನಡಿಗೆಯಲ್ಲೇ ಕಮಿಷನರ್ ಕಚೇರಿಗೆ ಆಗಮಿಸಿದ ಬಿಜೆಪಿ ಮುಖಂಡರು, ಆಯುಕ್ತರ ಎದುರು ಕೈಬರಹದ ಮೂಲಕ ದೂರು ದಾಖಲಿಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಶ್ವಥ್ ನಾರಾಯಣ, ಬಿ.ಪಿ. ಹರೀಶ್, ಸಿ.ಕೆ. ರಾಮಮೂರ್ತಿ ಹಾಗೂ ಎಸ್. ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ, ದೊಣ್ಣೆ ಹಾಗೂ ರಾಡ್ಗಳಿಂದ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಈ ವೇಳೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ಹಲ್ಲೆಕೋರರನ್ನು ಬಂಧಿಸುವಂತೆ ಆಗ್ರಹಿಸಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII