ದೇಶದ ಯುವಕರು ಅರಾಜಕತೆಯ ಸಾಧನವಲ್ಲ, ರಾಷ್ಟ್ರ ನಿರ್ಮಾತೃಗಳು: ಬಾನ್ಸುರಿ ಸ್ವರಾಜ್
ನವದೆಹಲಿ, ಜುಲೈ 22(ಹಿ.ಸ.): ಆ್ಯಂಕರ್:ದೇಶದ ಯುವಕರು ಅರಾಜಕತೆಯ ಸಾಧನವಲ್ಲ, ರಾಷ್ಟ್ರ ನಿರ್ಮಾಣದ ಶಕ್ತಿಯಾಗಿದ್ದಾರೆ ಎಂದು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಹೇಳಿದ್ದಾರೆ. ಬುಧವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಅವಧಿಯಲ್ಲಿ ಕೇಂದ್ರ ಸರ್ಕಾರ ಅತ
भाजपा सांसद बांसुरी स्वराज


ನವದೆಹಲಿ, ಜುಲೈ 22(ಹಿ.ಸ.):

ಆ್ಯಂಕರ್:ದೇಶದ ಯುವಕರು ಅರಾಜಕತೆಯ ಸಾಧನವಲ್ಲ, ರಾಷ್ಟ್ರ ನಿರ್ಮಾಣದ ಶಕ್ತಿಯಾಗಿದ್ದಾರೆ ಎಂದು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಹೇಳಿದ್ದಾರೆ.

ಬುಧವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಅವಧಿಯಲ್ಲಿ ಕೇಂದ್ರ ಸರ್ಕಾರ ಅತ್ಯಂತ ಸಂವೇದನಾಶೀಲವಾಗಿ ನಡೆದುಕೊಂಡಿದ್ದು, ಶಾಂತಿಯುತ ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ ಎಂದು ಹೇಳಿದರು. ಸರ್ಕಾರದ ವಿರುದ್ಧ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಲು ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯ ಸಂಯೋಜಕ ಅಭಿಜೀತ್ ದೀಪಕೆ ಅವರಿಗೆ ದೆಹಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆಗೆ ಅನುಮತಿ ನೀಡಿದ್ದರು. ಅದರಂತೆ ಪ್ರತಿಭಟನಾಕಾರರು 21 ದಿನಗಳ ಕಾಲ ಜಂತರ್-ಮಂತರ್‌ನಲ್ಲಿ ಧರಣಿ ನಡೆಸಿದರು. ಪ್ರತಿಭಟನೆ ಶಾಂತಿಯುತವಾಗಿದ್ದವರೆಗೆ ಅವರನ್ನು ತೆರವುಗೊಳಿಸಲಿಲ್ಲ ಎಂದು ತಿಳಿಸಿದರು.

ಜುಲೈ 20ರಂದು ಪ್ರತಿಭಟನಾಕಾರರು ‘ಸಂಸತ್ ಚಲೋ’ಗೆ ಕರೆ ನೀಡಿ, ಅನುಮತಿಯಿಲ್ಲದೆ ಸಂಸತ್‌ಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿಯೂ ದೆಹಲಿ ಪೊಲೀಸರು ಸಂಯಮದಿಂದ ವರ್ತಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಂತಹ ಸಂಸ್ಥೆಗಳಿಗೆ ಗೌರವ ನೀಡುವುದು ಎಲ್ಲರ ಕರ್ತವ್ಯ ಎಂದು ಅವರು ಹೇಳಿದರು.

ಆರಂಭದಿಂದಲೂ ಪ್ರತಿಭಟನಾಕಾರರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧವಾಗಿತ್ತು. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದಾಗ ಪ್ರತಿಭಟನಾಕಾರರ ಬಳಿ ಲಿಖಿತ ಬೇಡಿಕೆಗಳ ಪಟ್ಟಿ ಇರಲಿಲ್ಲ. ನಡ್ಡಾ ಅವರು ಲಿಖಿತ ರೂಪದಲ್ಲಿ ಬೇಡಿಕೆ ಸಲ್ಲಿಸುವಂತೆ ಸೂಚಿಸಿದ ಬಳಿಕ ಸುಮಾರು ಎರಡೂವರೆ ಗಂಟೆಗಳ ಕಾಲ ತೆಗೆದುಕೊಂಡು ಪಟ್ಟಿ ಸಿದ್ಧಪಡಿಸಲಾಯಿತು. ಸಭೆಯಲ್ಲಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಪ್ರಯತ್ನಿಸುವುದಾಗಿ ತಿಳಿಸಲಾಗಿತ್ತು. ಪ್ರತಿಭಟನೆ ಹಿಂಪಡೆಯುವುದಾಗಿ ಭರವಸೆ ನೀಡಿದ್ದರೂ ಬಳಿಕ ತಮ್ಮ ಮಾತಿನಿಂದ ಹಿಂದೆ ಸರಿದರು ಎಂದು ಆರೋಪಿಸಿದರು.

ಪ್ರತಿಭಟನೆಯ ವೇಳೆ ಹಲವು ಸುಳ್ಳು ಆರೋಪಗಳನ್ನು ಮಾಡಲಾಗಿದೆ. 12 ವರ್ಷದ ಬಾಲಕಿ ಗಾಯಗೊಂಡಿದ್ದಾಳೆ ಎಂಬ ಹೇಳಿಕೆಯೂ ವಾಸ್ತವಕ್ಕೆ ದೂರವಾಗಿದ್ದು, ಜನರಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಇಂತಹ ಸುದ್ದಿಗಳನ್ನು ಹರಡಲಾಗಿದೆ ಎಂದು ಬಾನ್ಸುರಿ ಸ್ವರಾಜ್ ಹೇಳಿದರು.

ಕಳೆದ ಮೂರು ತಿಂಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೆಇಇ, ಸಿಯುಇಟಿ ಹಾಗೂ ನೀಟ್ ಸೇರಿದಂತೆ ಮೂರು ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಹೀಗಾಗಿ ದೇಶದ ಶಿಕ್ಷಣ ವ್ಯವಸ್ಥೆ ಹಾಗೂ ಪರೀಕ್ಷಾ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎನ್ನುವುದು ಸುಳ್ಳು ಹಾಗೂ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಎಂದು ಅವರು ಹೇಳಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande