
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:ಸುರಕ್ಷಿತ ಹಾಗೂ ಅಡೆತಡೆಯಿಲ್ಲದ ಪಾದಚಾರಿ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಮಹಾಲಕ್ಷ್ಮೀಪುರ ವಿಭಾಗದ ಶಂಕರನಗರ ಮುಖ್ಯ ರಸ್ತೆಯಲ್ಲಿ ಮಂಗಳವಾರ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿಯನ್ನು ತೆರವುಗೊಳಿಸಲಾಯಿತು.
'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನದ ಅಂಗವಾಗಿ ನಡೆದ ಕಾರ್ಯಾಚರಣೆಯಲ್ಲಿ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿದ್ದ ತೆರವುಗೊಳಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.
ನಗರದಲ್ಲಿ ಪಾದಚಾರಿಗಳಿಗೆ ಸುರಕ್ಷಿತ, ಸುಗಮ ಹಾಗೂ ಅಡೆತಡೆಯಿಲ್ಲದ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಅಭಿಯಾನವನ್ನು ನಿರಂತರವಾಗಿ ಮುಂದುವರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.