ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಅಪರ ಜಿಲ್ಲಾಧಿಕಾರಿ
ರಾಯಚೂರು, 22 ಜುಲೈ (ಹಿ.ಸ.): ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್ 04ರಂದು ಜಿಲ್ಲಾ ಮಟ್ಟದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಎಲ್ಲರ ಸಹಕಾರ, ಸಮನ್ವಯತೆ ಹಾಗೂ ಸಾಮರಸ್ಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಇಲಾಖೆಯ ಅ
Celebrate Hadapada Appanna Jayanti meaningfully: Additional District Collector


ರಾಯಚೂರು, 22 ಜುಲೈ (ಹಿ.ಸ.):

ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್ 04ರಂದು ಜಿಲ್ಲಾ ಮಟ್ಟದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಎಲ್ಲರ ಸಹಕಾರ, ಸಮನ್ವಯತೆ ಹಾಗೂ ಸಾಮರಸ್ಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಸಂಬಂಧ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 9.30ಕ್ಕೆ ರಾಯಚೂರು ನಗರದ ಬಸವೇಶ್ವರ ವೃತ್ತದಿಂದ ಮೆರೆವಣಿಗೆ ನಡೆಸಲಾಗುವುದು. ನಂತರ 11ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ವೇದಿಕೆಯಲ್ಲಿ ಹಡಪದ ಅಪ್ಪಣ್ಣ ಭಾವಚಿತ್ರದ ಬ್ಯಾನರ್ಗಳನ್ನು ಅಳವಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಯಂತಿ ಕಾರ್ಯಕ್ರಮದ ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು-ಹಾರಗಳ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರ ಆಹ್ವಾನಕ್ಕೆ ಕ್ರಮ ವಹಿಸಬೇಕು. ಎಲ್ಲ ಶಾಲಾ ಹಾಗೂ ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಮಾಡಬೇಕೆಂದು ಹೇಳಿದರು.

ವೇದಿಕೆ ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣ ಅವರ ಕುರಿತು ವಿಶೇಷ ಉಪನ್ಯಾಸ ನೀಡಲು ಅವರ ಕುರಿತು ಹೆಚ್ಚಿನ ಮಾಹಿತಿ ಇರುವ ಉಪನ್ಯಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲರೂ ಅನುಕೂಲ ಮಾಡಿಕೊಡಬೇಕು. ತಾಲೂಕು ಮಟ್ಟದಲ್ಲಿ ಜುಲೈ 29ರಂದು ಈ ಕಾರ್ಯಕ್ರಮದ ಆಚರಣೆ ಮಾಡಲಾಗುವುದು. ಸಮಾಜದ ಮುಖಂಡರ ಸಲಹೆಯಂತೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಗಸ್ಟ್ 04ರಂದು ಆಚರಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಸುರೇಶ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಡಿಟಿಡಿ ಚಂದ್ರಶೇಖರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧಿಕಾರಿ ಸರಸ್ವತಿ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಎಮ್.ಡಿ.ಗೋಕಲ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪುಷ್ಪಲತಾ, ಕಲ್ಯಾಣ ಕರ್ನಾಟಕ ಮಹಿಳಾ ಸಂಘದ ಮುಖಂಡರಾದ ಡಾ.ಶಾಂತ ಕುಲಕರ್ಣಿ, ಹಡಪದ ಅಪ್ಪಣ್ಣ ಸಮಾಜದ ಮುಖಂಡರಾದ ಬಸವರಾಜ ಹೀರಾ, ಬಸವಂತರಾಯ್, ಅಮರಪ್ಪ, ಕರಿಬಸವ, ಗದ್ಯಪ್ಪ, ಮುತ್ತಣ್ಣ, ಆದಪ್ಪ, ನರಸಪ್ಪ, ಮಹಾದೇವ, ವೀರಭದ್ರಪ್ಪ, ಅಯ್ಯಪ್ಪ ಸಿರವಾರ, ವೀರೇಶ್, ಮಲ್ಲಿಕಾರ್ಜುನ ಮಹಾಂತೇಶ, ಗುಂಡಪ್ಪ ಸೇರಿದಂತೆ ಇತರರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande