ಕುಟುಂಬದ ನೋವು ತೋಡಿಕೊಂಡ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಹಾಸನ, 22 ಜುಲೈ (ಹಿ.ಸ.): ಆ್ಯಂಕರ್: ತಾಯಿಯ ಮೂರನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ತಮ್ಮ ತಾಯಿಯ ಅಗಲಿಕೆ ಹಾಗೂ ಅವರು ಜೀವಿತಾವಧಿಯಲ್ಲಿ ಅನುಭವಿಸಿದ ಮಾನಸಿಕ ಯಾತನೆಯನ್ನು ಸ್ಮರಿಸಿ ಭಾವುಕರಾದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಮತ್ತು ಕಾರ್
HD Kumaraswamy Emotional Statement in Hassan


ಹಾಸನ, 22 ಜುಲೈ (ಹಿ.ಸ.):

ಆ್ಯಂಕರ್:

ತಾಯಿಯ ಮೂರನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ತಮ್ಮ ತಾಯಿಯ ಅಗಲಿಕೆ ಹಾಗೂ ಅವರು ಜೀವಿತಾವಧಿಯಲ್ಲಿ ಅನುಭವಿಸಿದ ಮಾನಸಿಕ ಯಾತನೆಯನ್ನು ಸ್ಮರಿಸಿ ಭಾವುಕರಾದರು.

ಕಾರ್ಯಕ್ರಮದಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ನುಡಿನಮನ ಸಲ್ಲಿಸಿದ್ದಕ್ಕೆ ಕೃತಜ್ಞತೆ ತಿಳಿಸಿದ ಅವರು, ಕಳೆದ ಒಂದೂವರೆ ವರ್ಷದಿಂದ ತಾಯಿ ಪಟ್ಟ ಹಿಂಸೆ ಹಾಗೂ ಮಾನಸಿಕ ವೇದನೆಯನ್ನು ನೆನಪಿಸಿಕೊಂಡು ಕಣ್ಣೀರಿಟ್ಟರು. ತಾನು ಊರಿಗೆ ಹೋದಾಗಲೆಲ್ಲಾ ಚೆನ್ನಾಗಿ ಕೆಲಸ ಮಾಡಪ್ಪ, ಯಾವಾಗ ಬಂದೆ? ಎಂದು ಪ್ರೀತಿಯಿಂದ ವಿಚಾರಿಸುತ್ತಿದ್ದ ತಾಯಿ, ಕೊನೆಯ ದಿನಗಳಲ್ಲಿ ನೆನಪಿನ ಶಕ್ತಿ ಕುಂದಿ ಅನೇಕ ಸನ್ನಿವೇಶಗಳನ್ನು ತೋಡಿಕೊಂಡರು.

ಕುಟುಂಬದಲ್ಲಿ ನಡೆದ ಕೆಲವು ಘಟನೆಗಳು ಹಾಗೂ ತಾಯಿ ಅನುಭವಿಸಿದ ಕಷ್ಟದ ದಿನಗಳನ್ನು ನೆನೆದು ಭಾವುಕರಾದ ಅವರು, ಅಂತಹ ಕಠಿಣ ಸನ್ನಿವೇಶಗಳನ್ನು ತಡೆದುಕೊಳ್ಳಲಾರದೆ ತಾಯಿ ಇಂದು ನಮ್ಮನ್ನು ಅಗಲಿದ್ದಾರೆ ಎಂದು ನೋವು ಹಂಚಿಕೊಂಡರು. ಈ ವೇಳೆ ಸ್ಥಳದಲ್ಲಿದ್ದ ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರು ಸಾಂತ್ವನ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande