
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ರೌಡಿ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಬೆಳ್ಳಂಬೆಳಗ್ಗೆ ರೌಡಿ ಆಸಾಮಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಸತೀಶ್ ಹಾಗೂ ಇನ್ಸ್ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಈ ಪರೇಡ್ ಆಯೋಜಿಸಲಾಗಿತ್ತು. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 85 ಮಂದಿ ರೌಡಿ ಶೀಟರ್ಗಳಿದ್ದು, ಈ ಪೈಕಿ 45 ಮಂದಿ ಹಾಜರಾಗಿದ್ದರು. ಪರೇಡ್ನಲ್ಲಿ ಸಕ್ರಿಯವಾಗಿರುವ ರೌಡಿಗಳಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದರೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದೇ ವೇಳೆ, ಅಪರಾಧ ಚಟುವಟಿಕೆಗಳಿಂದ ದೂರವಿದ್ದು ರೌಡಿಗಳ ಹೆಸರುಗಳನ್ನು ರೌಡಿ ಪಟ್ಟಿಯಿಂದ ತೆಗೆದುಹಾಕಲು ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII