
ನವದೆಹಲಿ, 22 ಜುಲೈ (ಹಿ.ಸ.):
ಆ್ಯಂಕರ್:ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಫಿಲಿಪ್ಪೀನ್ಸ್‌ನ ರಾಜಧಾನಿ ಮನಿಲಾದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಹಾಗೂ ಜಾಗತಿಕ ಮಹತ್ವದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಭೇಟಿಯ ಬಳಿಕ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಜೈಶಂಕರ್, ಭಾರತ–ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಕ್ಷೇತ್ರಗಳಾದ ವ್ಯಾಪಾರ ಮತ್ತು ಸುಂಕಗಳು, ಇಂಧನ, ರಕ್ಷಣೆ ಹಾಗೂ ಭದ್ರತೆ, ಅಪರೂಪದ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆ ಕುರಿತು ಫಲಪ್ರದ ಮಾತುಕತೆ ನಡೆದಿರುವುದಾಗಿ ತಿಳಿಸಿದ್ದಾರೆ.
ಇದಲ್ಲದೆ, ಪ್ರಾದೇಶಿಕ, ಜಾಗತಿಕ ಹಾಗೂ ಬಹುಪಕ್ಷೀಯ ವೇದಿಕೆಗಳಲ್ಲಿ ಉಭಯ ರಾಷ್ಟ್ರಗಳ ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತೂ ಅಭಿಪ್ರಾಯ ವಿನಿಮಯ ಮಾಡಿಕೊಂಡಿರುವುದಾಗಿ ಅವರು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.