ಜುಲೈ 24 : ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಾಥಾ
ಬಳ್ಳಾರಿ, 22 ಜುಲೈ (ಹಿ.ಸ.) ಆ್ಯಂಕರ್ : ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಬಳ್ಳಾರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಸಂಯುಕ್ತಾಶ್ರಯದಲ್ಲಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರಾಘವ ಕಲಾಮಂದಿರ
ಜುಲೈ 24 : ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಾಥಾ


ಬಳ್ಳಾರಿ, 22 ಜುಲೈ (ಹಿ.ಸ.)

ಆ್ಯಂಕರ್ : ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಬಳ್ಳಾರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಸಂಯುಕ್ತಾಶ್ರಯದಲ್ಲಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರಾಘವ ಕಲಾಮಂದಿರದಲ್ಲಿ ಬಾಲ್ಯವಿವಾಹ ನಿಷೇಧ, ಪೋ ಕಾಯ್ದೆ, ಸೈಬರ್ ಕ್ರೈಂ, ಮಾದಕ ದ್ರವ್ಯ ಮುಕ್ತ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಟ್ಟದ ಜಾಥಾ ಮತ್ತು ಸಮಾವೇಶ ನಡೆಯಲಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಎಸ್ಪಿ ಕಚೇರಿಯಿಂದ ಜಾಥಾ ನಡೆಯಲಿದ್ದು, ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ಧಲಿಂಗ ಪ್ರಭು ಚಾಲನೆ ನೀಡುವರು. ಬಳಿಕ ಬೆಳಿಗ್ಗೆ 11 ಗಂಟೆಗೆ ನಗರದ ರಾಘವ ಕಲಾಮಂದಿರದಲ್ಲಿ ಸಮಾವೇಶ ಕಾರ್ಯಕ್ರಮ ಉದ್ಘಾಟಿಸುವರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪಾಲ್ಗೊಳ್ಳುವರು. ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಸಿ. ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸುವರು.

ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಹಾಗೂ ನೋಡಲ್ ಅಧಿಕಾರಿ ನವೀನ್ ಕುಮಾರ್ ಎನ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಬಳ್ಳಾರಿ ನಗರ ಡಿವೈಎಸ್ಪಿ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಗೋವಿಂದರಾಜುಲು ವಿ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಿಂಧೆ ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತರಾವ್ ಎಂ.ವಿ., ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಶಿವಲೀಲಾ ಸೇರಿದಂತೆ ಮಕ್ಕಳು, ಯುವಕ-ಯುವತಿಯರು ಮತ್ತು ಸ್ವ-ಸಹಾಯ ಸಂಘದ ಮಹಿಳೆಯರು ಭಾಗವಹಿಸುವರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande