ಸಂಸತ್ನಲ್ಲಿ ಪ್ರತಿಭಟನೆ: ಎರಡೂ ಸದನಗಳ ಕಲಾಪ ಮುಂದೂಡಿಕೆ
ನವದೆಹಲಿ, ಜುಲೈ 22(ಹಿ‌.ಸ.): ಆ್ಯಂಕರ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಜಂತರ್-ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಪ್ರತಿ ಪಕ್ಷದ ನಾಯಕರೊಂದಿಗೆ ನಡೆದ ಘರ್ಷಣೆ ಖಂಡಿಸಿ ವಿರೋಧ ಪಕ್ಷಗಳು ಬುಧವಾರ ಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಿದವು. ಗದ್ದಲದ ಹಿನ್ನೆಲೆ
नीट-यूजी पेपर लीक और प्रदर्शनकारी छात्रों पर पुलिस कार्रवाई के मुद्दे पर नारेबाजी करते हुए लोकसभा में विपक्षी सांसद।


ನವದೆಹಲಿ, ಜುಲೈ 22(ಹಿ‌.ಸ.):

ಆ್ಯಂಕರ್:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಜಂತರ್-ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಪ್ರತಿ ಪಕ್ಷದ ನಾಯಕರೊಂದಿಗೆ ನಡೆದ ಘರ್ಷಣೆ ಖಂಡಿಸಿ ವಿರೋಧ ಪಕ್ಷಗಳು ಬುಧವಾರ ಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಿದವು. ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಮುಂದೂಡಲಾಯಿತು.

ಅಧಿವೇಶನ ಆರಂಭಕ್ಕೂ ಮುನ್ನ ಇಂಡಿಯಾ ಮೈತ್ರಿಕೂಟದ ನಾಯಕರು ಸಭೆ ನಡೆಸಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದರು. ಬಳಿಕ ಸಂಸತ್ ಆವರಣದಲ್ಲಿ ಕಪ್ಪು ಬಟ್ಟೆ ಧರಿಸಿ ‘ಕಪ್ಪು ದಿನ’ ಆಚರಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಅವರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿದರು. ಸರ್ಕಾರ ನೀಟ್ ಪ್ರಕರಣದ ಕುರಿತು ಚರ್ಚೆಗೆ ಸಿದ್ಧವಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದರು.

ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಸರ್ಕಾರದ ಉತ್ತರದಾಯಿತ್ವಕ್ಕೆ ಒತ್ತಾಯಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande