ರಾಷ್ಟ್ರಧ್ವಜ ದಿನ: ತ್ರಿವರ್ಣ ಧ್ವಜದ ಮೌಲ್ಯಗಳನ್ನು ಎತ್ತಿಹಿಡಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, 22 ಜುಲೈ (ಹಿ.ಸ.): ಆ್ಯಂಕರ್: ರಾಷ್ಟ್ರೀಯ ಧ್ವಜ ದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ತ್ರಿವರ್ಣ ಧ್ವಜಕ್ಕೆ ಗೌರವ ಸಲ್ಲಿಸಿ, ಏಕತೆ, ಪ್ರಜಾಪ್ರಭುತ್ವ ಹಾಗೂ ನ್ಯಾಯದ ಮೌಲ್ಯಗಳನ್ನು ಕಾಪಾಡುವ ಸಂಕಲ್ಪವನ್ನು ಮತ್ತೊಮ್ಮೆ ನವೀಕರಿಸೋಣ ಎಂದು ಕರೆ ನೀಡಿದ್ದಾರೆ. ಎಕ್ಸ್
Cm dks


ಬೆಂಗಳೂರು, 22 ಜುಲೈ (ಹಿ.ಸ.):

ಆ್ಯಂಕರ್:

ರಾಷ್ಟ್ರೀಯ ಧ್ವಜ ದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ತ್ರಿವರ್ಣ ಧ್ವಜಕ್ಕೆ ಗೌರವ ಸಲ್ಲಿಸಿ, ಏಕತೆ, ಪ್ರಜಾಪ್ರಭುತ್ವ ಹಾಗೂ ನ್ಯಾಯದ ಮೌಲ್ಯಗಳನ್ನು ಕಾಪಾಡುವ ಸಂಕಲ್ಪವನ್ನು ಮತ್ತೊಮ್ಮೆ ನವೀಕರಿಸೋಣ ಎಂದು ಕರೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, 1947ರ ಜುಲೈ 22ರಂದು ಭಾರತದ ಸಂವಿಧಾನ ಸಭೆಯು ಸ್ವತಂತ್ರ ಭಾರತದ ರಾಷ್ಟ್ರೀಯ ಧ್ವಜವಾಗಿ ತ್ರಿವರ್ಣ ಧ್ವಜವನ್ನು ಅಂಗೀಕರಿಸಿತ್ತು. ಈ ಧ್ವಜವು ನಮ್ಮ ಹಂಚಿಕೊಂಡ ಇತಿಹಾಸ, ತ್ಯಾಗ ಮತ್ತು ಆಶಯಗಳ ಪ್ರತೀಕವಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಧ್ವಜವು ಪ್ರತಿನಿತ್ಯ ದೇಶದ ಏಕತೆ, ಸಮಗ್ರತೆ ಮತ್ತು ಎಲ್ಲರನ್ನು ಒಳಗೊಂಡ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಸಂದೇಶದಲ್ಲಿ ಆಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande