ದೆಹಲಿಯಿಂದ ಬರಿಗೈಯಲ್ಲಿ ವಾಪಸಾದ ಸಚಿವಾಕಾಂಕ್ಷಿ ಪ್ರಸಾದ್ ಅಬ್ಬಯ್ಯ
ಬೆಂಗಳೂರು, 22 ಜುಲೈ (ಹಿ.ಸ.): ಆ್ಯಂಕರ್: ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿದ್ದ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ದೆಹಲಿ ಪ್ರವಾಸದ ಬಳಿಕ ಬರಿಗೈಯಲ್ಲಿ ವಾಪಸಾಗಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾ
Prasad Abbayya


ಬೆಂಗಳೂರು, 22 ಜುಲೈ (ಹಿ.ಸ.):

ಆ್ಯಂಕರ್:

ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿದ್ದ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ದೆಹಲಿ ಪ್ರವಾಸದ ಬಳಿಕ ಬರಿಗೈಯಲ್ಲಿ ವಾಪಸಾಗಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಲು ದೆಹಲಿಗೆ ತೆರಳಿದ್ದೆ ಎಂದ ಅವರು, ತಾವೂ ಸಚಿವಾಕಾಂಕ್ಷಿಯಾಗಿರುವುದಾಗಿ ಸ್ಪಷ್ಟಪಡಿಸಿದರು. ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿದ್ದು, ಜನರ ಅಪೇಕ್ಷೆಯಂತೆ ತಾವೂ ಕೂಡ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದು ವಿಶ್ವಾಸವಿದೆ ಎಂದರು. ಆದರೆ ಸಿಎಂ ಮತ್ತು ಡಿಸಿಎಂ ಹೇಳಿರುವಂತೆ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಮುಂದೂಡಲಾಗಿದ್ದು, ಮುಂದಿನ ಬೆಳವಣಿಗೆಗಳಿಗಾಗಿ ಕಾದು ನೋಡಬೇಕಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande