ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಕಾಂಗ್ರೆಸ್ ಗೆ ಯಾವುದೇ ನೈತಿಕ ಹಕ್ಕಿಲ್ಲ: ಆರ್. ಅಶೋಕ್
ಬೆಂಗಳೂರು, 22 ಜುಲೈ (ಹಿ.ಸ.) ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ನಿವಾಸದ ಮುಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪ್ರ
ಸಂದರ್ಭಿಕ ಚಿತ್ರ


ಬೆಂಗಳೂರು, 22 ಜುಲೈ (ಹಿ.ಸ.)

ಆ್ಯಂಕರ್:

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ನಿವಾಸದ ಮುಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಇದು ಉತ್ತಮ ಸಂಪ್ರದಾಯವಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೋದಿ ಸರ್ಕಾರದ ಅವಧಿಯಲ್ಲಿ ಎಂಬಿಬಿಎಸ್ ಹಾಗೂ ಪಿಜಿ ವೈದ್ಯಕೀಯ ಸೀಟುಗಳು ಗಣನೀಯವಾಗಿ ಹೆಚ್ಚಾಗಿದ್ದು, ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವಾಗಲೂ ವಿದ್ಯಾರ್ಥಿಗಳ ಪರವಾಗಿ ನಿಂತಿದೆ ಎಂದು ಸಮರ್ಥಿಸಿಕೊಂಡರು. ದೇಶದಲ್ಲಿ ಸೋತು ಮೂಲೆಗುಂಪಾಗಿರುವ ಕಾಂಗ್ರೆಸ್, ಅಮೆರಿಕ ಹಾಗೂ ಚೀನಾದಿಂದ ಹಣ ಪಡೆವ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಾ ಹೊಟ್ಟೆಕಿಚ್ಚಿನಿಂದ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಂಸತ್ತಿನಲ್ಲಿ ಮಾತನಾಡಲು ಧೈರ್ಯವಿಲ್ಲದ ರಾಹುಲ್ ಗಾಂಧಿ ಬರೀ ಬೀದಿ ನಾಟಕ ಮಾಡುತ್ತಿದ್ದಾರೆ ಎಂದರು.

ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಲಾಠಿಚಾರ್ಜ್ ಹಾಗೂ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಅಮಾಯಕರು ಸಾವನ್ನಪ್ಪಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿಲ್ಲ ಎಂದು ದೂರಿದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಲಿ ಎಂದು ಸವಾಲು ಹಾಕಿದ ಆರ್. ಅಶೋಕ್, ರಾಜ್ಯದ ಕೆಪಿಎಸ್ಸಿ ಪೇಪರ್ ಲೀಕ್ ಪ್ರಕರಣಗಳ ಬಗ್ಗೆಯೂ ಕಾಂಗ್ರೆಸ್ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande