ರಾಜ್ಯದಾದ್ಯಂತ ಇಂದು ಮಳೆ ಸಾಧ್ಯತೆ
ಕರಾವಳಿ-ಮಲೆನಾಡಿನ ಕೆಲವೆಡೆ ಭಾರಿ ಮಳೆ ಮುನ್ಸೂಚನೆ
ರಾಜ್ಯದಾದ್ಯಂತ ಇಂದು ಮಳೆ ಸಾಧ್ಯತೆ


ಬೆಂಗಳೂರು, 22 ಜುಲೈ (ಹಿ.ಸ.):

ಆ್ಯಂಕರ್:ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಹಾಗೂ ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಗುಡುಗು, ಸಿಡಿಲು ಮತ್ತು ಬಿರುಗಾಳಿಯ ಸಂದರ್ಭ ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ತಪ್ಪಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಕೆಎಸ್‌ಎನ್‌ಡಿಎಂಸಿ ಸಾರ್ವಜನಿಕರಿಗೆ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande