ಮಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ; ಅರ್ಜಿ ಆಹ್ವಾನ
ಹೊಸಪೇಟೆ, 22 ಜುಲೈ (ಹಿ.ಸ.): ಆ್ಯಂಕರ್ : ಮಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚಿಸಲು ಜಿಲ್ಲೆಯಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ಮತ್ತು ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸೇರಿದವರು
ಮಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ; ಅರ್ಜಿ ಆಹ್ವಾನ


ಹೊಸಪೇಟೆ, 22 ಜುಲೈ (ಹಿ.ಸ.):

ಆ್ಯಂಕರ್ : ಮಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚಿಸಲು ಜಿಲ್ಲೆಯಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ಮತ್ತು ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸೇರಿದವರು ಮತ್ತು ಸಮುದಾಯದ ಪ್ರತಿನಿಧಿಸುವ 2 ಪುರುಷರು ಹಾಗೂ 2 ಮಹಿಳೆಯರು ಸಾಮಾಜಿಕ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್,ಫೋಟೋ, ವಾಸಸ್ಥಳ ಪ್ರಮಾಣ ಪತ್ರ, ಪೊಲೀಸ್ ಚಾರಿತ್ರ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಛೇರಿ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande