
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ಪಾದಾಚಾರಿಗಳ ಬಹುದಿನಗಳ ಬೇಡಿಕೆಯಂತೆ ಶಿವಾಜಿನಗರದಲ್ಲಿ ಒತ್ತುರಿಯಾಗಿದ್ದ ಪಾದಾಚಾರಿ ಮಾರ್ಗಗಳನ್ನು ತೆರವುಗೊಳಿಸಿ, ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಹಲವು ದಿನಗಳಿಂದ ಫುಟ್ಪಾತ್ಗಳ ಮೇಲೆ ಅನಧಿಕೃತವಾಗಿ ಒತ್ತುವರಿ ಮಾಡಿಕೊಳ್ಳಲಾಗಿದ್ದು, ಇದರಿಂದ ಸಾರ್ವಜನಿಕರು ಮತ್ತು ಪಾದಾಚಾರಿಗಳು ರಸ್ತೆಯಲ್ಲೇ ನಡೆದಾಡುವಂತಾಗಿತ್ತು.
ಈ ಸಮಸ್ಯೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಬುಧವಾರ ಪಾದಾಚಾರಿ ಮಾರ್ಗದ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸಿದ್ದಾರೆ. ಒತ್ತುವರಿ ತೆರವಿನ ಬಳಿಕ ಮಾರ್ಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದ್ದು, ಸದ್ಯ ಫುಟ್ಪಾತ್ಗಳು ಅತ್ಯಂತ ಸುರಕ್ಷಿತವಾಗಿ ಮತ್ತು ಸುಂದರವಾಗಿ ಮರುಸ್ಥಾಪನೆಗೊಂಡಿವೆ. ಇದರಿಂದ ಪಾದಾಚಾರಿಗಳು ಯಾವುದೇ ಅಡೆತಡೆಯಿಲ್ಲದೆ ನೆಮ್ಮದಿಯಾಗಿ ಓಡಾಡಲು ಅನುಕೂಲವಾಗಿದ್ದು, ಸ್ಥಳೀಯ ಜನರಿಂದ ತೀವ್ರ ಮೆಚ್ಚುಗೆ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII