
ಕೊಪ್ಪಳ, 22 ಜುಲೈ (ಹಿ.ಸ.):
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ನಿರುದ್ಯೋಗಿ ಪದವೀಧರರಿಗೆ ಪತ್ರಿಕೋದ್ಯಮದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಡಿಜಿಟಲ್ ಉದ್ದಿಮೆ ಸ್ಥಾಪಿಸಲು ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೂಗಲದ್ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ-ಯುವತಿಯರು ಎಲೆಕ್ಟ್ರಾನಿಕ್ಸ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70ರಷ್ಟು ಅಥವಾ ಗರಿಷ್ಠ ರೂ. 5 ಲಕ್ಷಗಳ ಸಹಾಯಧನವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರು ಮಾಡಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜುಲೈ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲಿಚ್ಛೀಸುವ ಪರಿಶಿಷ್ಟ ಜಾತಿಗೆ ಸೇರಿದ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್