ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ
ಬಳ್ಳಾರಿ, 22 ಜುಲೈ (ಹಿ.ಸ.): ಆ್ಯಂಕರ್ : ಪ್ರತಿಯೊಬ್ಬರಿಗೂ ಕೇವಲ ಶಾರೀರಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯವೂ ಅತ್ಯಂತ ಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಡಿ.ಮಳಗಿ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕ
World Brain Day celebrated at District Hospital


World Brain Day celebrated at District Hospital


World Brain Day celebrated at District Hospital


World Brain Day celebrated at District Hospital


ಬಳ್ಳಾರಿ, 22 ಜುಲೈ (ಹಿ.ಸ.):

ಆ್ಯಂಕರ್ : ಪ್ರತಿಯೊಬ್ಬರಿಗೂ ಕೇವಲ ಶಾರೀರಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯವೂ ಅತ್ಯಂತ ಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಡಿ.ಮಳಗಿ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮ, ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾನಸಿಕ ಹಾಗೂ ನರಸಂಬಂಧಿ ತೊಂದರೆಗಳಿದ್ದಾಗ ಮನುಷ್ಯ ಸಮಾಜದಲ್ಲಿ ಗೌರವಯುತವಾಗಿ ಜೀವಿಸುವುದು ಕಷ್ಟವಾಗುತ್ತದೆ. ಈ ರೀತಿಯ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡದಿದ್ದರೆ, ಅದು ಶಾಶ್ವತ ವೈಕಲ್ಯಕ್ಕೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ಮಾನಸಿಕ ಹಾಗೂ ನರಸಂಬಂಧಿ ತೊಂದರೆಗಳಿಂದ ಉಂಟಾಗುವ ಶಾರೀರಿಕ ಸಮಸ್ಯೆಗಳನ್ನು ಗುಣಪಡಿಸಲು ಫಿಜಿಯೋಥೆರಪಿಯ ಪಾತ್ರ ಪ್ರಮುಖವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯವಿದೆ. ಸಾರ್ವಜನಿಕರು ಹಾಗೂ ರೋಗಿಗಳು ಗರಿಷ್ಠ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮನುಷ್ಯನ ದಿನನಿತ್ಯದ ಚಟುವಟಿಕೆಗಳಿಗೆ ಹಾಗೂ ಸಮಗ್ರ ಆರೋಗ್ಯಕ್ಕೆ ಮಿದುಳಿನ ಆರೈಕೆ ಅತ್ಯಂತ ಅವಶ್ಯಕ. ಮಿದುಳಿನ ಆರೋಗ್ಯ ಹದಗೆಟ್ಟರೆ ಇಡೀ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಆರೋಗ್ಯಕರ ಮಿದುಳು ಇಲ್ಲದಿದ್ದರೆ ಮನುಷ್ಯ ಯಾವುದೇ ಕೆಲಸವನ್ನು ಸರಿಯಾಗಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ನರರೋಗ ತಜ್ಞರ ಕೊರತೆಯಿದ್ದರೂ, ವಾರದಲ್ಲಿ ಎರಡು ದಿನ ಮಂಗಳವಾರ ಮತ್ತು ಶುಕ್ರವಾರ ವಿಶೇಷ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಈ ದಿನಗಳಲ್ಲಿ ಸುಮಾರು 300 ರಿಂದ 400 ರೋಗಿಗಳನ್ನು ತಪಾಸಣೆ ನಡೆಸಿ ಉಚಿತ ಔಷಧಿಗಳನ್ನು ನೀಡುತ್ತಿದ್ದಾರೆ. ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೈಹಿಕ ನೋವು ತಕ್ಷಣವೇ ಗೋಚರಿಸುತ್ತದೆ, ಆದರೆ ಮೆದುಳು ಮತ್ತು ಮಾನಸಿಕ ಸಮಸ್ಯೆಗಳು ತಡವಾಗಿ ಬೆಳಕಿಗೆ ಬರುತ್ತವೆ. ಹೀಗಾಗಿ ಆರಂಭದಲ್ಲೇ ರೋಗಲಕ್ಷಣಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುವುದು ಅಗತ್ಯ ಎಂದು ತಿಳಿಸಿದರು.

ವಯಸ್ಸಾದವರಲ್ಲಿ ಅಥವಾ 50-60 ವರ್ಷ ದಾಟಿದವರಲ್ಲಿ ಕಾಣಿಸಿಕೊಳ್ಳುವ ಮೆದುಳಿನ ಸಮಸ್ಯೆಗಳು, ಪಾಶ್ರ್ವವಾಯು, ಖಿನ್ನತೆಯಂತಹ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ಮತ್ತು ಕೌನ್ಸಿಲಿಂಗ್ ನೀಡುವುದು ಬ್ರೇನ್ ಹೆಲ್ತ್ ಇನಿಶಿಯೇಟಿವ್ ಯೋಜನೆಯ ಉದ್ದೇಶವಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ‘ಕರ್ನಾಟಕ ಬ್ರೇನ್ ಹೆಲ್ತ್ ಇನಿಶಿಯೇಟಿವ್' ಯೋಜನೆಯಡಿ ಪ್ರತ್ಯೇಕ ವಿಭಾಗ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸೇವೆಯನ್ನು ನೀಡಲಾಗುತ್ತಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯು ಮೊದಲ ಹಾಗೂ ಎರಡನೇ ಸ್ಥಾನದಲ್ಲಿದ್ದು, ಅತ್ಯುತ್ತಮ ಸಾಧನೆ ಮಾಡಿದೆ ಎಂದರು.

ಈ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಹಾಗೂ ಜನರಲ್ ಸರ್ಜನ್ ಡಾ.ಮಲ್ಲಿಕಾರ್ಜುನ್, ಜಿಲ್ಲಾ ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ್ ಎಮ್., ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದ ನೋಡಲ್ ಅಧಿಕಾರಿ ಹಾಗೂ ತಜ್ಞ ವೈದ್ಯ ಡಾ.ರಾಕೇಶ್, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ವೈದ್ಯಾಧಿಕಾರಿ ಡಾ.ಪ್ರಿಯಾಂಕ ಪ್ರಸಾದ್ ಹಾಗೂ ಇತರೆ ವೈದ್ಯಾಧಿಕಾರಿಗಳು, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಸಿಬ್ಬಂದಿ ವರ್ಗ, ವಿವಿಧ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande