
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪದ್ಮನಾಭನಗರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಉಭಯ ನಾಯಕರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡರು.
ಇದೇ ಭೇಟಿಯ ವೇಳೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ತಾಯಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಜಮೀರ್ ಅಹ್ಮದ್ ಖಾನ್ ಸಂತಾಪ ಸೂಚಿಸಿದರು. ಕುಟುಂಬಕ್ಕೆ ಎದುರಾಗಿರುವ ಈ ದುಃಖದ ಸಂದರ್ಭದಲ್ಲಿ ಸಾಂತ್ವನ ಹೇಳಿ, ಅಗಲಿದ ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಹಿರಿಯರ ನಿಧನಕ್ಕೆ ಸಾಂತ್ವನ ಹೇಳಲು ಮತ್ತು ಆರೋಗ್ಯ ವಿಚಾರಿಸಲು ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆಯಿತು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII