ಪಿಜಿಯಲ್ಲಿ ಸಿಲಿಂಡರ್ ಸ್ಫೋಟ; 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್: ಬೆಂಗಳೂರು ಹೊರವಲಯದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಶ್ರೀ ಸಾಯಿ ಕಂಫರ್ಟ್ ಪಿಜಿಯಲ್ಲಿ ಸಂಭವಿಸಿದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಅನ್ಯರಾಜ್ಯ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಈ ದುರ್ಘಟನೆ ನ
ANEKAL-PG


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:

ಬೆಂಗಳೂರು ಹೊರವಲಯದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಶ್ರೀ ಸಾಯಿ ಕಂಫರ್ಟ್ ಪಿಜಿಯಲ್ಲಿ ಸಂಭವಿಸಿದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಅನ್ಯರಾಜ್ಯ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

ನಾಗರಾಜ್ ರೆಡ್ಡಿ ಎಂಬುವವರಿಗೆ ಸೇರಿದ ಈ ಕಟ್ಟಡವನ್ನು ಲಿಂಗರಾಜು ಎಂಬವರು ಲೀಸ್ ಪಡೆದು ಪಿಜಿ ನಡೆಸುತ್ತಿದ್ದರು. ಕಟ್ಟಡದ ಎರಡನೇ ಮಹಡಿಯಲ್ಲಿ ಪವರ್ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ರಾತ್ರಿಯಿಡೀ ಅಡುಗೆ ಅನಿಲ ಹರಡಿಕೊಂಡಿದೆ. ಬೆಳಿಗ್ಗೆ ಕಾರ್ಮಿಕರು ಎದ್ದು ರೂಮ್ ಲೈಟ್ ಆನ್ ಮಾಡುತ್ತಿದ್ದಂತೆ ಸಂಭವಿಸಿದ ತೀವ್ರ ಸ್ಫೋಟದಿಂದ ಪಿಜಿ ಕೊಠಡಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಕಟ್ಟಡದ ಬಾಗಿಲು ಮತ್ತು ಕಿಟಕಿಗಳು ಪುಡಿಪುಡಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬೆಂಕಿಗಾಹುತಿಯಾಗಿವೆ.

ಪಶ್ಚಿಮ ಬಂಗಾಳ ಹಾಗೂ ಉತ್ತರ ಭಾರತದ ವಿವಿಧ ರಾಜ್ಯಗಳ ಮೂಲದ ಖಾಸಗಿ ಕಂಪನಿ ಕಾರ್ಮಿಕರು ಪಿಜಿಯ 18 ಕೊಠಡಿಗಳಲ್ಲಿ ವಾಸವಿದ್ದರು. ಸುಟ್ಟ ಗಾಯಗಳಿಂದ ಬಳಲಿದ ಕಾರ್ಮಿಕರು ರಸ್ತೆಯಲ್ಲಿ ನರಳಾಡಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande