
ಬೆಂಗಳೂರು, 23 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದ ಕೈಗಾರಿಕಾ ಪ್ರಗತಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳೊಳಗೆ ಕ್ವಿನ್ ಸಿಟಿ ಹಂತ-1ರಲ್ಲಿ 200 ಎಕರೆ ವಿಸ್ತಾರದ ಬೃಹತ್ ಸೆಮಿಕಂಡಕ್ಟರ್ ಪಾರ್ಕ್ ಕಾರ್ಯಾಚರಣೆ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಪ್ರಕಟಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಗುರುವಾರ ಆರಂಭವಾದ 15ನೇ ವರ್ಷದ ವ್ಯೂಹಾತ್ಮಕ ವಿದ್ಯುನ್ಮಾನ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು
ಸಂಶೋಧನೆ ಮತ್ತು ಚಿಪ್ ವಿನ್ಯಾಸ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕ ಕೇಂದ್ರವಾಗಿದ್ದು, ಈಗಾಗಲೇ ಪ್ರಮುಖ ಕಂಪನಿಗಳು ಬಂಡವಾಳ ಹೂಡುತ್ತಿವೆ. ನೂತನ ವೈಮಾಂತರಿಕ್ಷ ನೀತಿಯಡಿ ಸಮಗ್ರ ಕ್ಲಸ್ಟರ್ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ವಲಯದಲ್ಲಿ 23 ಸಾವಿರ ಕೋಟಿ ರೂ. ಹೂಡಿಕೆಯಿಂದ 3,500ಕ್ಕೂ ಹೆಚ್ಚು ಎಂಜಿನಿಯರಿಂಗ್ ಹುದ್ದೆಗಳು ಸೃಷ್ಟಿಯಾಗಲಿವೆ. ಅಪ್ಲೈಡ್ ಮೆಟೀರಿಯಲ್ಸ್, ಲ್ಯಾಮ್ ರೀಸರ್ಚ್ ಹಾಗೂ ಭಾರತ್ ಸೆಮಿ ಸಿಸ್ಟಮ್ಸ್ ಸಂಸ್ಥೆಗಳು ಕೈಜೋಡಿಸಿವೆ.
ಇದೇ ವೇದಿಕೆಯಲ್ಲಿ ಸಚಿವರು ಎಲ್ಸೀನಾ ವರದಿ-26 ಮತ್ತು ಕರ್ನಲ್ ಲಾಕ್ಯಾಜೀತ್ ಸಿಂಗ್ ಚವ್ಹಾಣ್ ಬರೆದಿರುವ 'ವಿಂಗ್ಸ್ ಆಫ್ ಅಸ್ತ್ರ' ಪುಸ್ತಕವನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಸಿ-ಡಾಟ್ ಸಿಇಒ ಡಾ. ರಾಜಕುಮಾರ್ ಉಪಾಧ್ಯಾಯ, ಬಿಇಎಲ್ ಸಿಇಒ ಮನೋಜ್ ಜೈನ್, ಡಿಆರ್ಡಿಒ ಮಹಾನಿರ್ದೇಶಕ ಡಾ. ಬಿ ಕೆ ದಾಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII