ವಿಜಯಪುರ ಬಿ.ಎಲ್.ಡಿ.ಇ ಎ.ವಿ.ಎಸ್ ಆಯುರ್ವೇದ ಕಾಲೇಜಿಗೆ ದೇಶದಲ್ಲಿ 4ನೇ ಸ್ಥಾನ
ವಿಜಯಪುರ, 23 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯವು ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಿ ಹೆಮ್ಮೆಯ ಕ್ಷಣವನ್ನು ನಿರ್ಮಿಸಿದೆ ಎಂದು ಶಾಸಕ ಸುನೀಲ್ ಗೌಡ ಪಾಟೀಲ್ ಹೇಳಿದರು. ದೇಶದ ಖ್ಯಾತ ಶಿಕ್ಷಣ ಸಮೀಕ್ಷ
ಜೆಡಿಎಸ್


ವಿಜಯಪುರ, 23 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯವು ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಿ ಹೆಮ್ಮೆಯ ಕ್ಷಣವನ್ನು ನಿರ್ಮಿಸಿದೆ ಎಂದು ಶಾಸಕ ಸುನೀಲ್ ಗೌಡ ಪಾಟೀಲ್ ಹೇಳಿದರು.

ದೇಶದ ಖ್ಯಾತ ಶಿಕ್ಷಣ ಸಮೀಕ್ಷಾ ಸಂಸ್ಥೆಯಾದ ಔಟ್ ಲುಕ್ ಐ ಕೇರ್ 2026 ನಡೆಸಿದ ರಾಷ್ಟ್ರೀಯ ಸಮೀಕ್ಷೆಯಲ್ಲಿ ದೇಶದ ಅತ್ಯುತ್ತಮ 20 ಆಯುರ್ವೇದ ಕಾಲೇಜುಗಳ ಪೈಕಿ ಬಿ.ಎಲ್.ಡಿ.ಇ ಎ.ವಿ.ಎಸ್. ಆಯುರ್ವೇದ ಕಾಲೇಜು ಸತತ ಎರಡನೇ ಬಾರಿಗೆ ರಾಷ್ಟ್ರದ 4ನೇ ಸ್ಥಾನ ಪಡೆದು ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ದೇಶದ ವಿವಿಧ ಆಯುರ್ವೇದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಸಮಗ್ರವಾಗಿ ಪರಿಶೀಲಿಸಿ ಪ್ರಕಟಿಸಲಾದ ಈ ಸಮೀಕ್ಷೆಯಲ್ಲಿ ಬೋಧನೆಯ ಗುಣಮಟ್ಟ, ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣ, ಆಧುನಿಕ ಶೈಕ್ಷಣಿಕ ಸೌಲಭ್ಯಗಳು, ಸಂಯೋಜಿತ ಆಸ್ಪತ್ರೆಯಲ್ಲಿನ ಪ್ರಾಯೋಗಿಕ ತರಬೇತಿ, ಸಂಶೋಧನಾ ಚಟುವಟಿಕೆಗಳು, ವೈಜ್ಞಾನಿಕ ಪ್ರಬಂಧಗಳ ಪ್ರಕಟಣೆ, ಅಧ್ಯಾಪಕರ ಸಾಮರ್ಥ್ಯ ಹಾಗೂ ವಿದ್ಯಾರ್ಥಿಗಳ ಸಾಧನೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ಈ ರ್ಯಾಂಕಿಂಗ್ ನೀಡಲಾಗಿದೆ.

ಬಿ.ಎಲ್.ಡಿ.ಇ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯವು ಹಲವು ವರ್ಷಗಳಿಂದ ಗುಣಮಟ್ಟದ ಆಯುರ್ವೇದ ಶಿಕ್ಷಣ, ಸಂಶೋಧನೆ ಹಾಗೂ ಆರೋಗ್ಯ ಸೇವೆಯಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿದ್ದು, ಈ ರಾಷ್ಟ್ರೀಯ ಮಾನ್ಯತೆ ಸಂಸ್ಥೆಯ ಶೈಕ್ಷಣಿಕ ಬದ್ಧತೆಗೆ ಮತ್ತೊಂದು ಗರಿ ಮೂಡಿಸಿದಂತಾಗಿದೆ.

ಪ್ರತಿ ವರ್ಷ ಈ ಮಹಾವಿದ್ಯಾಲಯದಿಂದ ಸುಮಾರು 100 ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಅಂಡ್ ಸರ್ಜರಿ ಪದವೀಧರರಾಗುತ್ತಿದ್ದು, 22 ವೈದ್ಯರು ಎಂ.ಡಿ. ಹಾಗೂ ಎಂ.ಎಸ್. ಸ್ನಾತಕೋತ್ತರ ಪದವಿ ಪಡೆದು ದೇಶ-ವಿದೇಶಗಳಲ್ಲಿ ಆರೋಗ್ಯ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದ ಸಂಸ್ಥೆ ಆಯುರ್ವೇದ ವೈದ್ಯಕೀಯ ಕ್ಷೇತ್ರಕ್ಕೆ ಉತ್ತಮ ಗುಣಮಟ್ಟದ ವೈದ್ಯರನ್ನು ನೀಡುವ ಪ್ರಮುಖ ಶಿಕ್ಷಣ ಕೇಂದ್ರವಾಗಿ ಗುರುತಿಸಿಕೊಂಡಿದೆ.

ಈ ಮಹತ್ವದ ಸಾಧನೆಗೆ ಕಾರಣರಾದ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು, ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕರೇತರ ಸಿಬ್ಬಂದಿ, ಸಂಶೋಧಕರು ಮತ್ತು ವಿದ್ಯಾರ್ಥಿಗಳ ಸಮರ್ಪಿತ ಸೇವೆಯನ್ನು ಶ್ಲಾಘಿಸಲಾಗಿದೆ. ಅವರ ಪರಿಶ್ರಮ ಮತ್ತು ಬದ್ಧತೆಯ ಫಲವಾಗಿ ಕಾಲೇಜು ರಾಷ್ಟ್ರೀಯ ಮಟ್ಟದಲ್ಲಿ ನಿರಂತರವಾಗಿ ಉನ್ನತ ಸ್ಥಾನಗಳನ್ನು ಗಳಿಸುತ್ತಿದೆ ಎಂದು ಪ್ರಶಂಸಿಸಲಾಗಿದೆ.

ಈ ಸಾಧನೆಯ ಹಿನ್ನೆಲೆಯಲ್ಲಿ ಸಂಸ್ಥೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳ ಮೂಲಕ ವಿಜಯಪುರ ಜಿಲ್ಲೆ ಹಾಗೂ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂಬ ಆಶಯ ವ್ಯಕ್ತಪಡಿಸಲಾಗಿದೆ

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande