ವಿದ್ಯಾರ್ಥಿಗಳ ದಾರಿ ತಪ್ಪಿಸಲು ಕಾಂಗ್ರೆಸ್ ನಾಯಕರು ಯತ್ನ: ಬಿ.ವೈ. ವಿಜಯೇಂದ್ರ
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್: ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಮತ್ತು ಯುವಜನರ ಉಜ್ವಲ ಭವಿಷ್ಯಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡುತ್ತಿದ್ದು, ನೀಟ್ ಪರೀಕ್ಷೆಯಲ್ಲಿ ಉಂಟಾದ ಗೊಂದಲಗಳಿಗೆ ಕೇವಲ 35 ದಿನಗಳಲ್ಲಿ ಮರುಪರೀಕ್ಷೆ ನಡೆಸಿ ಯಶಸ್ವಿಯಾಗಿ ಫಲಿತಾಂಶ ಪ್ರಕಟಿಸಿದೆ ಎಂದು ರಾಜ್ಯ ಬಿಜ
ಸಂದರ್ಭಿಕ ಚಿತ್ರ


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಮತ್ತು ಯುವಜನರ ಉಜ್ವಲ ಭವಿಷ್ಯಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡುತ್ತಿದ್ದು, ನೀಟ್ ಪರೀಕ್ಷೆಯಲ್ಲಿ ಉಂಟಾದ ಗೊಂದಲಗಳಿಗೆ ಕೇವಲ 35 ದಿನಗಳಲ್ಲಿ ಮರುಪರೀಕ್ಷೆ ನಡೆಸಿ ಯಶಸ್ವಿಯಾಗಿ ಫಲಿತಾಂಶ ಪ್ರಕಟಿಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಇಂತಹ ಪರೀಕ್ಷಾ ಗೊಂದಲಗಳಿಗೆ ಶಾಶ್ವತ ತಿಲಾಂಜಲಿ ಇಡಲು ಕೇಂದ್ರ ಸರ್ಕಾರವು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಪಾರದರ್ಶಕತೆ ತರಲು ಚಿಂತನೆ ನಡೆಸಿದೆ.

ಆದರೆ, ವಿದೇಶ ಪ್ರವಾಸ ಮುಗಿಸಿ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರತಿಪಕ್ಷಗಳು ವಿದ್ಯಾರ್ಥಿಗಳ ಹಿತ ಕಾಯುವುದನ್ನು ಬಿಟ್ಟು, ರಾಜಕೀಯ ಲಾಭಕ್ಕಾಗಿ ಪ್ರಧಾನಿ ನಿವಾಸದ ಬಳಿ ಧರಣಿ ನಡೆಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸತ್ತಿನಲ್ಲಿ ಈ ಕುರಿತು ಸಮಗ್ರ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಮುಕ್ತವಾಗಿದೆ ಎಂದು ಸ್ಪಷ್ಟಪಡಿಸಿದರೂ, ವಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ದೂರಿದರು. ಇದೇ ವೇಳೆ, ಕರ್ನಾಟಕದಲ್ಲಿ ಉದ್ಯೋಗಕ್ಕಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವ ಯುವಕರ ಮೇಲೆ ಲಾಠಿಚಾರ್ಜ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧವೂ ಅವರು ಕಿಡಿಕಾರಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande