ಇಂಡಿ ನಗರದ ಕೆಇಬಿ ತಾಂಡಾದಲ್ಲಿ ಸಿಸಿ ರಸ್ತೆ ಕಾಮಗಾರಿ ಪೂರ್ಣ; ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ
ವಿಜಯಪುರ, 23 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ನಗರದ ಕೆಇಬಿ ತಾಂಡಾದಲ್ಲಿ ಬಹುನಿರೀಕ್ಷಿತ ಸಿಮೆಂಟ್ ಕಾಂಕ್ರೀಟ್ (ಸಿಸಿ) ರಸ್ತೆ ನಿರ್ಮಾಣ ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆಗೆ ಸ್ಪಂದಿಸಿದಂತಾಗಿದೆ. ಈ ಕಾಮಗಾರಿಯಿಂದ ತಾಂಡಾದ ಜ
ಬಿಬಿ


ವಿಜಯಪುರ, 23 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ನಗರದ ಕೆಇಬಿ ತಾಂಡಾದಲ್ಲಿ ಬಹುನಿರೀಕ್ಷಿತ ಸಿಮೆಂಟ್ ಕಾಂಕ್ರೀಟ್ (ಸಿಸಿ) ರಸ್ತೆ ನಿರ್ಮಾಣ ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆಗೆ ಸ್ಪಂದಿಸಿದಂತಾಗಿದೆ. ಈ ಕಾಮಗಾರಿಯಿಂದ ತಾಂಡಾದ ಜನರಿಗೆ ಉತ್ತಮ ಗುಣಮಟ್ಟದ ರಸ್ತೆ ಸಂಪರ್ಕ ದೊರೆತಿದ್ದು, ದೈನಂದಿನ ಸಂಚಾರ ಸುಗಮವಾಗುವುದರ ಜೊತೆಗೆ ಮಳೆಗಾಲದಲ್ಲಿ ಉಂಟಾಗುತ್ತಿದ್ದ ಕೆಸರು, ನೀರು ನಿಲ್ಲುವಿಕೆ ಹಾಗೂ ಸಂಚಾರದ ತೊಂದರೆಗಳಿಗೆ ಶಾಶ್ವತ ಪರಿಹಾರ ಸಿಕ್ಕಂತಾಗಿದೆ.

ಈ ಕುರಿತು ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಂತಸ ವ್ಯಕ್ತಪಡಿಸಿ, ಕ್ಷೇತ್ರದ ಪ್ರತಿಯೊಂದು ಪ್ರದೇಶಕ್ಕೂ ಉತ್ತಮ ಗುಣಮಟ್ಟದ ಮೂಲಸೌಕರ್ಯ ಕಲ್ಪಿಸುವುದು ತಮ್ಮ ಪ್ರಮುಖ ಧ್ಯೇಯವಾಗಿದೆ ಎಂದು ತಿಳಿಸಿದ್ದಾರೆ. ನಗರ ಮತ್ತು ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.

ಕೆಇಬಿ ತಾಂಡಾದಲ್ಲಿ ಪೂರ್ಣಗೊಂಡಿರುವ ಸಿಸಿ ರಸ್ತೆ ಸ್ಥಳೀಯರ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುರಕ್ಷಿತ ಹಾಗೂ ಅನುಕೂಲಕರವಾಗಿಸಲಿದೆ. ಸಾರ್ವಜನಿಕರ ಅಗತ್ಯಗಳನ್ನು ಗುರುತಿಸಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಕ್ಷೇತ್ರದ ಯಾವುದೇ ಭಾಗ ಅಭಿವೃದ್ಧಿಯಿಂದ ವಂಚಿತವಾಗದಂತೆ ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸ್ಥಳೀಯ ನಿವಾಸಿಗಳು ರಸ್ತೆ ಕಾಮಗಾರಿ ಪೂರ್ಣಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಅನುಷ್ಠಾನಗೊಳಿಸುತ್ತಿರುವ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande