ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹ
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್: ದೇಶದ ಯುವಕರು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಲ
ಸಂದರ್ಭಿಕ ಚಿತ್ರ


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:

ದೇಶದ ಯುವಕರು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದ್ದು, ಇದಕ್ಕೆ ಸಂಬಂಧಿಸಿದವರು ನೈತಿಕ ಹೊಣೆ ಹೊತ್ತು ಉತ್ತರಿಸಬೇಕಾಗಿದೆ ಎಂದು ಅವರು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತವು ಜಾಗತಿಕ ಮಟ್ಟದಲ್ಲಿ ಪ್ರತಿಭೆಗಳ ಕೇಂದ್ರವಾಗಿ ಗುರುತಿಸಿಕೊಂಡಿದೆ. ಆದರೆ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ವಿಫಲವಾದರೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಯುವಜನರ ಬದುಕು ಹಾಳಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ರಾಜಕೀಯ ಪಕ್ಷದ ಕಾರ್ಯಕರ್ತರ ಮೂಲಭೂತ ಹಕ್ಕು. ಆದರೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸುವುದು, ಮಾಧ್ಯಮಗಳ ಕಾರ್ಯಕ್ಕೆ ಅಡ್ಡಿಪಡಿಸುವುದು ಮತ್ತು ಬೆದರಿಕೆ ಹಾಕುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಅವರು ಖಂಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಆಡಳಿತದ ಅವಧಿಯ ವಿಚಾರಗಳನ್ನೂ ಪ್ರಸ್ತಾಪಿಸಿದ ಮುಖ್ಯಮಂತ್ರಿ, ಬಿಜೆಪಿ ನಾಯಕರು ಇತರರನ್ನು ಟೀಕಿಸುವ ಮೊದಲು ತಮ್ಮ ಆಡಳಿತಾವಧಿಯಲ್ಲಿ ನಡೆದ ಅಕ್ರಮಗಳು ಹಾಗೂ ವೈಫಲ್ಯಗಳನ್ನು ನೆನಪಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ಯುವಕರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುವ ಬದಲು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ನೈತಿಕ ಹೊಣೆ ಹೊತ್ತು ಸಂಬಂಧಪಟ್ಟ ಕೇಂದ್ರ ಸಚಿವರು ರಾಜೀನಾಮೆ ನೀಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ಅವರು, ಇದು ಕೇವಲ ರಾಜಕೀಯ ವಿಷಯವಲ್ಲ. ಇಡೀ ದೇಶದ ಯುವಕರು ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ ಎಂದು ಹೇಳಿದರು.

ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವ ಜೊತೆಗೆ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ವ್ಯವಸ್ಥೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande