ರಾಜ್ಯದ ಸಂಪೂರ್ಣ ವರದಿ ಬಂದ ಬಳಿಕ ಬರ ಘೋಷಣೆ ತೀರ್ಮಾನ: ಜಿ. ಪರಮೇಶ್ವರ್
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ತಲೆದೋರಿರುವ ಮಳೆಯ ಅಭಾವ ಹಾಗೂ ಸಂಭಾವ್ಯ ಬರ ಪರಿಸ್ಥಿತಿಯ ಕುರಿತು ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಬರ ಘೋಷಣೆ ಮಾಡುವ ಮುನ್ನ ಎಲ್ಲಾ ವಲಯಗಳ ಸಂಪೂರ್ಣ ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನ
Parameshwara


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ತಲೆದೋರಿರುವ ಮಳೆಯ ಅಭಾವ ಹಾಗೂ ಸಂಭಾವ್ಯ ಬರ ಪರಿಸ್ಥಿತಿಯ ಕುರಿತು ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಬರ ಘೋಷಣೆ ಮಾಡುವ ಮುನ್ನ ಎಲ್ಲಾ ವಲಯಗಳ ಸಂಪೂರ್ಣ ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಸ್ತುತ ಬೆಂಗಳೂರು ಹಾಗೂ ಮೈಸೂರು ವಿಭಾಗಗಳ ಪರಾಮರ್ಶೆ ಬಾಕಿ ಇದ್ದು, ಜುಲೈ 25 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರು ವಿಭಾಗದ ಪರಿಶೀಲನಾ ಸಭೆ ನಡೆಯಲಿದೆ. ಇದರ ಬೆನ್ನಲ್ಲೇ ಮೈಸೂರು ವಿಭಾಗದ ಪರಾಮರ್ಶೆಯನ್ನು ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ರಾಜ್ಯದ ಸಮಗ್ರ ಚಿತ್ರಣ ಲಭ್ಯವಾಗಲಿದ್ದು, ರೈತರಿಗೆ ಮತ್ತು ಸಾಮಾನ್ಯ ಜನರಿಗೆ ಯಾವ ರೀತಿ ನೆರವು ನೀಡಬೇಕು ಎಂಬುದರ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಣದ ಕೊರತೆಯಿಲ್ಲ – ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 329 ಕೋಟಿ ಲಭ್ಯ:

ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ತುರ್ತು ಕುಡಿಯುವ ನೀರಿನ ನಿರ್ವಹಣೆಗಾಗಿ ಪ್ರತಿ ಜಿಲ್ಲೆಗೆ ತಲಾ 5 ಕೋಟಿ ರೂಪಾಯಿಗಳನ್ನು ಹಾಗೂ ಪ್ರತಿಯೊಬ್ಬ ಶಾಸಕರಿಗೆ ಅವರ ಕ್ಷೇತ್ರದ ಅಭಿವೃದ್ಧಿಗೆ 1 ಕೋಟಿ ರೂಪಾಯಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 329 ಕೋಟಿ ರೂಪಾಯಿಗಳ ಅನುದಾನ ಲಭ್ಯವಿದ್ದು, ಕಾಮಗಾರಿಗಳ ಪ್ರಸ್ತಾವನೆ ಬಂದ ತಕ್ಷಣವೇ ಹಣ ಬಿಡುಗಡೆ ಮಾಡಲಾಗುವುದು.

ಮುಂಗಾರು ಆರಂಭದಲ್ಲಿ ಮಳೆ ಬಂದಿದ್ದರಿಂದ ರೈತರು ಬಿತ್ತನೆ ಮಾಡಿದ್ದರು, ಆದರೆ ಮಳೆ ನಿಂತುಹೋದ ಕಾರಣ ರಾಜ್ಯದ ಬಹುತೇಕ ಕಡೆಗಳಲ್ಲಿ ಬೆಳೆಗಳು ಸಂಪೂರ್ಣವಾಗಿ ಒಣಗಿಹೋಗಿವೆ. ಸದ್ಯಕ್ಕೆ ರಾಜ್ಯದ ಯಾವ ಜಿಲ್ಲೆಯಲ್ಲೂ ಉತ್ತಮ ಬೆಳೆ ಇಲ್ಲದಂತಾಗಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು. ಆದಾಗ್ಯೂ, ಮುಂಬರುವ ಆಗಸ್ಟ್ ತಿಂಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಮಳೆ ಬಂದ ಬಳಿಕ ತಡವಾದರೂ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬಿತ್ತನೆ ಮಾಡಲು ಅವಕಾಶವಿರುತ್ತದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಬರ ಅಧ್ಯಯನಕ್ಕಾಗಿ ವಿಸ್ತೃತ ಮನವಿ ಸಲ್ಲಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande