


ನವದೆಹಲಿ, ಜುಲೈ 23(ಹಿ.ಸ.):
ಆ್ಯಂಕರ್:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರತಿಪಕ್ಷಗಳ ಸಂಸದರು ಗುರುವಾರ ಸಂಸತ್‌ನ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಹಲವು ಪ್ರತಿಪಕ್ಷ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಪ್ರತಿಭಟನಾಕಾರರು ಪ್ರಜಾಪ್ರಭುತ್ವ ಸಾಯುತ್ತಿದೆ ಮತ್ತು ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿ ಎಂಬ ಬರಹಗಳಿರುವ ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು.
ಈ ಕುರಿತು ಎಕ್ಸನಲ್ಲಿ ಹೇಳಿಕೆ ನೀಡಿರುವ ಕೆ.ಸಿ. ವೇಣುಗೋಪಾಲ್, ದೇಶದ ಯುವಕರ ಹಿತಕ್ಕಾಗಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸುತ್ತಿವೆ ಎಂದು ಹೇಳಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂಬ ತಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್ ಅವರು, ಈ ಹೋರಾಟವು ಸಂಸತ್ತಿನೊಳಗೆ ಮಾತ್ರವಲ್ಲದೆ ಹೊರಗೂ ಮುಂದುವರಿಯಲಿದೆ ಎಂದು ತಿಳಿಸಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.