ಜಂತರ್-ಮಂತರ್ ಪ್ರತಿಭಟನೆ ವೇಳೆ ದೆಹಲಿ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ
ನವದೆಹಲಿ, ಜುಲೈ 23(ಹಿ.ಸ.): ಆ್ಯಂಕರ್: ಜಂತರ್-ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಬುಧವಾರ ತಡರಾತ್ರಿ ದೆಹಲಿ ಪೊಲೀಸ್ ಇನ್‌ಸ್ಪೆಕ್ಟರ್ ನಂದ ಕಿಶೋರ್ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡ ಅವರನ್ನು ತಕ್ಷಣವೇ ರಾಮ ಮನೋಹರ್ ಲೋಹಿಯಾ (ಆರ
जंतर-मंतर पर प्रदर्शन


ನವದೆಹಲಿ, ಜುಲೈ 23(ಹಿ.ಸ.):

ಆ್ಯಂಕರ್:

ಜಂತರ್-ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಬುಧವಾರ ತಡರಾತ್ರಿ ದೆಹಲಿ ಪೊಲೀಸ್ ಇನ್‌ಸ್ಪೆಕ್ಟರ್ ನಂದ ಕಿಶೋರ್ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡ ಅವರನ್ನು ತಕ್ಷಣವೇ ರಾಮ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಬಿಡುಗಡೆ ಮಾಡಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ನಂದ ಕಿಶೋರ್ ಸಿಂಗ್ ಅವರು ಪ್ರಸ್ತುತ ನಾನಕ್‌ಪುರದಲ್ಲಿರುವ ವಿಶೇಷ ಪೊಲೀಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬುಧವಾರ ರಾತ್ರಿ ಜಂತರ್-ಮಂತರ್‌ನಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಅವರಿಗೆ ಭದ್ರತಾ ಕರ್ತವ್ಯ ನೀಡಲಾಗಿತ್ತು. ವಾಹನ ನಿಲುಗಡೆ ಮಾಡಿ ಕರ್ತವ್ಯ ಸ್ಥಳದತ್ತ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ, ಗುಂಪಿನಲ್ಲಿದ್ದ ಕೆಲ ದುಷ್ಕರ್ಮಿಗಳು ಅವರನ್ನು ಸುತ್ತುವರಿದು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಇನ್‌ಸ್ಪೆಕ್ಟರ್ ಅವರ ದೇಹದ ಹಲವು ಭಾಗಗಳಿಗೆ ಗಾಯಗಳಾಗಿವೆ. ಇದೇ ವೇಳೆ ಅವರ ದೆಹಲಿ ಪೊಲೀಸ್ ಅಧಿಕೃತ ಗುರುತಿನ ಚೀಟಿ (ಐ-ಕಾರ್ಡ್) ಹಾಗೂ ಚಿನ್ನದ ಸರವನ್ನು ಕಸಿದುಕೊಂಡಿರುವ ಆರೋಪವೂ ಕೇಳಿಬಂದಿದೆ. ಸ್ಥಳದಲ್ಲಿದ್ದ ಇತರ ಪೊಲೀಸರು ಅವರನ್ನು ಗುಂಪಿನಿಂದ ರಕ್ಷಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದರು.

ಘಟನೆಯ ಸಂಬಂಧ ಪ್ರತಿಭಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸರ್ಕಾರಿ ನೌಕರರ ಮೇಲೆ ಹಲ್ಲೆ, ದರೋಡೆ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಬಳಿಕ ಜಂತರ್-ಮಂತರ್ ಪ್ರತಿಭಟನಾ ಸ್ಥಳದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಗಾಯಗೊಂಡ ಇನ್‌ಸ್ಪೆಕ್ಟರ್ ನಂದ ಕಿಶೋರ್ ಸಿಂಗ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande