
ಕೊಪ್ಪಳ, 23 ಜುಲೈ (ಹಿ.ಸ.)
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ತಿಳಿಸಿದ್ದಾರೆ.
ಕೊಪ್ಪಳ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮಂಜೂರಾತಿ ಸಂಖ್ಯೆಗಿ0ತ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ 100 ಸಂಖ್ಯಾ ಬಲವುಳ್ಳ ಒಂದು ಹೆಚ್ಚುವರಿ ವಸತಿ ನಿಲಯವನ್ನು ಪ್ರಾರಂಭಿಸಬೇಕಾಗಿರುತ್ತದೆ. ಆದ್ದರಿಂದ ಕೊಪ್ಪಳ ನಗರದಲ್ಲಿ 10 ಶೌಚಾಲಯ ಮತ್ತು 10 ಸ್ನಾನಗೃಹಗಳು ಹಾಗೂ ಅಗತ್ಯ ಮೂಲಸೌಕರ್ಯವನ್ನು ಹೊಂದಿರುವ ಬಾಡಿಗೆ ಕಟ್ಟಡದ ಅವಶ್ಯಕತೆ ಇರುತ್ತದೆ.
ಮೇಲಿನ ಎಲ್ಲ ಸೌಕರ್ಯಗಳುಳ್ಳ ಆಸಕ್ತ ಕಟ್ಟಡದ ಮಾಲೀಕರು ಅಗತ್ಯ ದಾಖಲಾತಿಗಳೊಂದಿಗೆ ಹೊಸ ಆರ್.ಟಿ.ಒ ಕಚೇರಿ ಹತ್ತಿರವಿರುವ ಸಹಾಯಕ ನಿರ್ದೇಶಕರ ಕಚೇರಿ ಕೊಪ್ಪಳ ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್