ಕೊಪ್ಪಳ: ವಿಶ್ವ ಮೆದುಳು ದಿನಾಚರಣೆ
ಕೊಪ್ಪಳ, 23 ಜುಲೈ (ಹಿ.ಸ.): ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ) ಕಾರ್ಯ
ಕೊಪ್ಪಳ: ವಿಶ್ವ ಮೆದುಳು ದಿನಾಚರಣೆ


ಕೊಪ್ಪಳ: ವಿಶ್ವ ಮೆದುಳು ದಿನಾಚರಣೆ


ಕೊಪ್ಪಳ: ವಿಶ್ವ ಮೆದುಳು ದಿನಾಚರಣೆ


ಕೊಪ್ಪಳ, 23 ಜುಲೈ (ಹಿ.ಸ.):

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ) ಕಾರ್ಯಕ್ರಮದ ಅಂಗವಾಗಿ ಮೆದುಳಿನ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ ಯನ್ನು “ಮೆದುಳು ಆರೋಗ್ಯ: ಎಲ್ಲರಿಗೂ ಲಭ್ಯವಾಗಲಿ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕರಾದ ಡಾ. ಮಂಜುನಾಥ ಅವರು ಮಾತಾನಾಡಿ, ಮೆದುಳಿನ ಆರೋಗ್ಯ ಹಾಗೂ ನರವೈಜ್ಞಾನಿಕ ಕಾಯಿಲೆಗಳ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು. ಉತ್ತಮ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಹತ್ವ, ನರವೈಜ್ಞಾನಿಕ ಕಾಯಿಲೆಗಳ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರಿಂದ ಮೆದುಳಿಗೆ ಸಂಬAಧಿಸಿದ ಕಾಯಿಲೆಗಳ ಅಪಾಯವನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಕುರಿತು ವಿವರವಾಗಿ ತಿಳಿಸಿದರು ಹಾಗೂ ತಲೆನೋವು, ಅಪಸ್ಮಾರ, ಮರೆವಿನ ಕಾಯಿಲೆ ಹಾಗೂ ಪಾರ್ಶ್ವವಾಯು ಎಂಬ ನಾಲ್ಕು ಪ್ರಮುಖ ನರವೈಜ್ಞಾನಿಕ ಕಾಯಿಲೆಗಳ ಬಗ್ಗೆ ಮಾಹಿತಿ ನೀಡಿದರು. ನರರೋಗಗಳಿಗೆ ಸಂಬ0ಧಿಸಿದ ಖಾಯಿಲೆಗಳಿಗೆ ಜಿಲ್ಲಾ ಆಸ್ಪತ್ರೆಯಿಂದ ಚಿಕಿತ್ಸೆ ಲಭ್ಯವಾಗುವ ವ್ಯವಸ್ಥೆಯನ್ನು ಕಭೀ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಭೀ ಕಾರ್ಯಕ್ರಮದ ಫಿಸಿಯೋಥೆರಪಿಸ್ಟ್ ಆದ ಡಾ. ಚೈತ್ರಾ ಸರೋದೆ ಅವರು ಕಭೀ ಕಾರ್ಯಕ್ರಮದಲ್ಲಿ ನರವೈಜ್ಞಾನಿಕ ಕಾಯಿಲೆಗಳಾದ ತಲೆನೋವು, ಪಾರ್ಶ್ವವಾಯು, ಅಪಸ್ಮಾರ ಹಾಗೂ ಡಿಮಾನ್ಷಿಯ ಅಂತಹ ಕಾಯಿಲೆಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಹಾಗೂ ನರವೈಜ್ಞಾನಿಕ ಕಾಯಿಲೆ ಇರುವಂತಹ ವ್ಯಕ್ತಿಗೆ ಬೆಂಗಳೂರಿನ ನಿಮ್ಹಾನ್ಸ್ ಇಂದ ಟೆಲಿ ನ್ಯೂರೋಲಾಜಿ ಎಂಬ ಸೇವೆಯನ್ನು ನೀಡಲಾಗುತ್ತದೆ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು ಹಾಗೂ ಫಿಸಿಯೋಥೆರಪಿ ಸೇವೆಯು ರೋಗಿಗಳ ಪುನರ್ವಸತಿಯಲ್ಲಿ ಅವುಗಳ ಮಹತ್ವವನ್ನು ವಿವರಿಸಿದರು.

ರಾಷ್ಟಿಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಕ್ಲಿನಿಕಲ್ ಸೈಕಾಲಜಿಸ್ಟ್ ಶಾಂತಾ ಅವರು ತಂಬಾಕು ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಹಾನಿಕಾರಕ ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಅವರು ಧೂಮಪಾನ ಹಾಗೂ ಧೂಮರಹಿತ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅಪಾಯಗಳನ್ನು ವಿವರಿಸಿ, ತಂಬಾಕು ಸೇವನೆಯನ್ನು ತ್ಯಜಿಸುವುದರಿಂದ ದೊರೆಯುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಸಿದರು.

ಎನ್.ಸಿ.ಡಿ ಘಟಕದ ಆಪ್ತಸಮಾಲೋಚಕರಾದ ಶಿವಪುತ್ರಪ್ಪ ಮಾತಾನಾಡಿ ದಿನನಿತ್ಯದ ಚಟುವಟಿಕೆಯಲ್ಲಿ ಮೆದುಳನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರಾದ ಡಾ. ಸಾಗರ್ ಹಾಗೂ ಡಾ. ರಾಮ್, ಎನ್ಸಿಡಿ ಘಟಕದ ವೈದ್ಯಾಧಿಕಾರಿಗಳಾದ ಡಾ. ಶರಣಪ್ಪ, ದಂತ ವಿಭಾಗದ ಡಾ. ಮಂಜುಳಾ, ಎನ್ಸಿಡಿ ಹಾಗೂ ಆರ್ಕೆಎಸ್ಕೆ ಕಾರ್ಯಕ್ರಮಗಳ ಸಿಬ್ಬಂದಿಗಳು ಹಾಗೂ ಕಭೀ ಕಾರ್ಯಕ್ರಮದ ತಂಡದ ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಕಭೀ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ತೇಜಸ್ವಿನಿ ಅವರು ಈ ಕಾರ್ಯಕ್ರಮದ ಮೂಲಕ ಭಾಗವಹಿಸಿದವರಲ್ಲಿ ಮೆದುಳಿನ ಆರೋಗ್ಯದ ಮಹತ್ವದ ಬಗ್ಗೆ ಪರಿಣಾಮಕಾರಿ ಅರಿವು ಮೂಡಿಸಲಾಗಿದೆ. ವಿಶ್ವ ಮೆದುಳು ದಿನಾಚರಣೆಯನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಎಲ್ಲಾ ಗಣ್ಯರು, ಸಿಬ್ಬಂದಿ ಹಾಗೂ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande