ಎಸ್.ಐ.ಆರ್: ಕುಷ್ಟಗಿ ವಿಧಾನಸಭಾ ಕ್ಷೇತ್ರ : 1,97,118 ಡಿಜಿಟಲೀಕರಣ
ಕುಷ್ಟಗಿ, 23 ಜುಲೈ (ಹಿ.ಸ.) ಆ್ಯಂಕರ್ : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಗೆ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಜೂನ್ 30 ರಂದು 60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 268 ಬೂತ್ ಮಟ್ಟದ ಅಧಿಕಾರಿಗಳು ಗಣತಿ ನಮೂನೆಗಳನ್ನು ವಿತರಿಸುವ ಸಲುವಾಗಿ ಮನೆ ಮನೆ ಭೇಟಿ
ಎಸ್.ಐ.ಆರ್: ಕುಷ್ಟಗಿ ವಿಧಾನಸಭಾ ಕ್ಷೇತ್ರ : 1,97,118 ಡಿಜಿಟಲೀಕರಣ


ಕುಷ್ಟಗಿ, 23 ಜುಲೈ (ಹಿ.ಸ.)

ಆ್ಯಂಕರ್ : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಗೆ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಜೂನ್ 30 ರಂದು 60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 268 ಬೂತ್ ಮಟ್ಟದ ಅಧಿಕಾರಿಗಳು ಗಣತಿ ನಮೂನೆಗಳನ್ನು ವಿತರಿಸುವ ಸಲುವಾಗಿ ಮನೆ ಮನೆ ಭೇಟಿ ಕಾರ್ಯವನ್ನು ಪ್ರಾರಂಭಿಸಿರುತ್ತಾರೆ.

60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಮತದಾರರ ಪಟ್ಟಿಯಲ್ಲಿ 2026 ರ ಜೂನ್ 16 ರವರೆಗೆ ಒಟ್ಟು 2,47,482 ಮತದಾರರಿದ್ದು, ಎಲ್ಲಾ ಮತದಾರರ ಗಣತಿ ನಮೂನೆಗಳು ಮುದ್ರಿತವಾಗಿದ್ದು, ಮುದ್ರಿತ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ವಿತರಿಸಲಾಗಿರುತ್ತದೆ.

ಜೂನ್ 30 ರಿಂದ ಜುಲೈ 22 ರ ಸಂಜೆ 4 ಗಂಟೆಯವರೆಗೆ ಒಟ್ಟು 2,47,482 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿದ್ದು, 1,97,118 ಗಣತಿ ನಮೂನೆಗಳನ್ನು ಡಿಜಟಲೀಕರಣ ಮಾಡಲಾಗಿದೆ ಎಂದು ಕೊಪ್ಪಳ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹಾಗೂ 60-ಕುಷ್ಟಗಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳಾದ ಮಂಜುನಾಥ ಗುಂಡೂರ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande