ನೀಟ್ ಪರೀಕ್ಷೆಯ ಅಕ್ರಮ: ಕೇಂದ್ರದ ವಿರುದ್ದ ಡಾ. ಜಿ. ಪರಮೇಶ್ವರ್ ವಾಗ್ದಾಳಿ
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್:ಕರ್ನಾಟಕದ ಸಿಇಟಿ ವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುತ್ತಿತ್ತು. ಆದರೆ ವೈದ್ಯಕೀಯ ಪ್ರವೇಶಕ್ಕೆ ಸಿಇಟಿ ಬದಲಿಗೆ ನೀಟ್ ಜಾರಿಯಾದ ನಂತರ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷ
Parmeshwar X post


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:ಕರ್ನಾಟಕದ ಸಿಇಟಿ ವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುತ್ತಿತ್ತು. ಆದರೆ ವೈದ್ಯಕೀಯ ಪ್ರವೇಶಕ್ಕೆ ಸಿಇಟಿ ಬದಲಿಗೆ ನೀಟ್ ಜಾರಿಯಾದ ನಂತರ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ರಾಷ್ಟ್ರೀಯ ಮಟ್ಟದ ಸಮಸ್ಯೆಯಾಗಿವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಸಂಪೂರ್ಣ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರವೇ ಹೊತ್ತುಕೊಳ್ಳಬೇಕು. ಪ್ರಕರಣಗಳ ಬಗ್ಗೆ ಪಾರದರ್ಶಕ ತನಿಖೆ ನಡೆಸಿ, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande