ಚರ್ಚೆಯಿಂದ ತಪ್ಪಿಸಿಕೊಳ್ಳುವುದೇ ಪ್ರತಿಪಕ್ಷಗಳ ರಾಜಕೀಯ ಇತಿಹಾಸ: ನಿತಿನ್ ನವೀನ್
ನವದೆಹಲಿ, ಜುಲೈ 23(ಹಿ.ಸ.): ಆ್ಯಂಕರ್:ಪ್ರತಿಪಕ್ಷಗಳು ಸಂಸತ್ತಿನಲ್ಲಿ ಚರ್ಚೆಯಿಂದ ದೂರ ಉಳಿಯುತ್ತಿವೆ ಎಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಿತಿನ್ ನವೀನ್ ಆರೋಪಿಸಿದ್ದಾರೆ. ನೀಟ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಸಂಬಂಧಿಸಿದ ಎಲ್ಲ ವಿಷಯಗಳ ಕುರಿತು ಚರ್ಚೆ ನಡೆಸಲು ಎನ್‌ಡಿಎ ಸರ್ಕಾರ ಸಂಪೂ
भाजपा अध्यक्ष नितिन नवीन


ನವದೆಹಲಿ, ಜುಲೈ 23(ಹಿ.ಸ.):

ಆ್ಯಂಕರ್:ಪ್ರತಿಪಕ್ಷಗಳು ಸಂಸತ್ತಿನಲ್ಲಿ ಚರ್ಚೆಯಿಂದ ದೂರ ಉಳಿಯುತ್ತಿವೆ ಎಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಿತಿನ್ ನವೀನ್ ಆರೋಪಿಸಿದ್ದಾರೆ. ನೀಟ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಸಂಬಂಧಿಸಿದ ಎಲ್ಲ ವಿಷಯಗಳ ಕುರಿತು ಚರ್ಚೆ ನಡೆಸಲು ಎನ್‌ಡಿಎ ಸರ್ಕಾರ ಸಂಪೂರ್ಣ ಸಿದ್ಧವಿದ್ದು, ಪ್ರತಿಪಕ್ಷಗಳು ಚರ್ಚೆಗೆ ಮುಂದೆ ಬರುತ್ತಿಲ್ಲ ಎಂದು ಅವರು ಹೇಳಿದರು.

ಸಂಸತ್ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಿತಿನ್ ನವೀನ್, ಪ್ರತಿಪಕ್ಷಗಳಿಗೆ ಬಹಿರಂಗ ಸವಾಲು ಹಾಕಿದರು. ನೀಟ್ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಸಂಬಂಧಿಸಿದ ಪ್ರತಿಯೊಂದು ವಿಷಯವನ್ನೂ ಸದನದಲ್ಲಿ ಮುಕ್ತವಾಗಿ ಚರ್ಚಿಸಿ. ಸರ್ಕಾರ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು ಹಾಗೂ ಎಲ್ಲ ವಿಷಯಗಳ ಕುರಿತು ಸಂವಾದ ನಡೆಸಲು ಸಿದ್ಧವಾಗಿದೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಹಾಗೂ ಪ್ರತಿಪಕ್ಷಗಳ ರಾಜಕೀಯ ಇತಿಹಾಸವೇ ಚರ್ಚೆಯಿಂದ ತಪ್ಪಿಸಿಕೊಳ್ಳುವುದಾಗಿದೆ ಎಂದು ಟೀಕಿಸಿದ ಅವರು, ಸದನದಲ್ಲಿ ಚರ್ಚೆಗೆ ಬಂದರೆ ಅವರ ದ್ವಂದ್ವ ನಿಲುವು ದೇಶದ ಜನರು ಹಾಗೂ ಯುವಕರ ಮುಂದೆ ಬಹಿರಂಗವಾಗುತ್ತದೆ ಎಂಬ ಕಾರಣಕ್ಕೇ ಅವರು ಚರ್ಚೆಯಿಂದ ದೂರ ಉಳಿಯುತ್ತಿದ್ದಾರೆ ಎಂದು ಆರೋಪಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande